ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಅವರ ಪುತ್ರನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ವಿಜಯಲಕ್ಷ್ಮೀ ಅವರಿಗೆ ನೋಟಿಸ್ ನೀಡಿದ್ದಾರೆ. ‘ನಿಮ್ಮ ಮತ್ತು ನಿಮ್ಮ ಮಗನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿರುವ ಕುರಿತು ಬಂದಿರುವ ಪತ್ರ ಆಧರಿಸಿ ದಾಖಲಿಸಿ ತನಿಖೆ ಸ್ವಯಂಪ್ರೇರಿತ ಪ್ರಕರಣ ಕೈಗೊಳ್ಳಲಾಗಿದೆ. ಈ ಆರೋಪ ಸಂಬಂಧ ನಿಮ್ಮ ಬಳಿ ದಾಖಲೆಗಳು ಇದ್ದಲ್ಲಿ ಹಾಜರುಪಡಿಸಿ ಮತ್ತು ಹೇಳಿಕೆ ದಾಖಲಿಸಿ’ ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ. ಎರಡು ದಿನದ ಹಿಂದೆಯೇ ಪೊಲೀಸರು ವಿಜಯಲಕ್ಷ್ಮೀ ಅವರಿಗೆ ಈ ನೋಟಿಸ್ ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







