ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು (Yoga Centre) ನಡೆಸುತ್ತಿದ್ದ. ಈ ಯೋಗ ಸೆಂಟರ್ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







