Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

WhatsApp New Rules : ಮಾರ್ಚ್ 1 ರಿಂದ ವಾಟ್ಸಾಪ್, ಟೆಲಿಗ್ರಾಮ್ ಬಳಕೆಯಲ್ಲಿ ಭಾರಿ ಬದಲಾವಣೆ! ನಿಮ್ಮ ಫೋನ್‌ನಲ್ಲಿ ಸಿಮ್ ಇಲ್ಲದಿದ್ದರೆ ಅಪ್ಲಿಕೇಶನ್ ಬಂದ್?

ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*
ರಾಜ್ಯ

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 7, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

*ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

*ಸೇಫ್ ಎ ಥಾನ್ ಗೆ ಚಾಲನೆ ನೀಡಿದ ಸಾರಿಗೆ ಸಚಿವರು*

ದೈಹಿಕ ಚಟುವಟಿಕೆಗಳಿಂದ ಉತ್ತಮ ಆರೋಗ್ಯ, ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ಮನಸ್ಸು ಶಾಂತವಾಗಿದ್ದರೆ ವಾಹನ ಚಾಲನೆ, ಪ್ರಯಾಣದ ವೇಳೆ ನಾವು ಎಚ್ಚರಿಕೆಯಿಂದ ಇರಲು ಸಾಧ್ಯ. ಅದರಿಂದ ರಸ್ತೆ ಸುರಕ್ಷತೆ ಸಾಧ್ಯವಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾರಿಗೆ ಇಲಾಖೆಯು ಬೆಂಗಳೂರು ಸಂಚಾರ ಪೊಲೀಸ್ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ “ನಮ್ಮ ರಸ್ತೆ ನಮ್ಮ ಸುರಕ್ಷತೆ” 5ಕೆ ‘ಸೇಫ್ ಎ ಥಾನ್’ ವಾಕಿಂಗ್, ರನ್ನಿಂಗ್, ಸೈಕ್ಲಿಂಗ್, ಬೈಕಿಂಗ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಅಪಘಾತಗಳು, ರಸ್ತೆ ಸುರಕ್ಷತೆ ಬಗ್ಗೆ ಬೇರೆಯವರನ್ನು ದೂಷಿಸುವ ಬದಲು ನಾವು ಎಚ್ಚರಿಕೆ ವಹಿಸಬೇಕು. ಬೆಂಗಳೂರಿನಂತಹ ಮಹಾ ನಗರದಲ್ಲಿ ಅವಸರ, ಗಡಿಬಿಡಿಯಿಂದಲೇ ಬಹುತೇಕ ಅಪಘಾತ ಸಂಭವಿಸುತ್ತವೆ. ಅದೇ ನಾವು ಸ್ವಲ್ಪ ಬೇಗ ಹೊರಟರೆ ಅವಸರದ ಪ್ರಶ್ನೆಯೇ ಬರುವುದಿಲ್ಲ. ಅಸರದಲ್ಲಿದ್ದಾಗ ಮನಸ್ಸಿನ ಮೇಲೆ ಒತ್ತಡ ಬೀಳುತ್ತದೆ. ಅದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಾರಿಗೆ ಆಯುಕ್ತ ಯೋಗೀಶ್ ಎ.ಎಂ ಮಾತನಾಡಿ, ರಸ್ತೆ ಸುರಕ್ಷತೆಯು ಕೇವಲ ನಿಯಮ ಪಾಲನೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಜೀವವನ್ನು ಉಳಿಸುವ ಒಂದು ಮಹತ್ತರ ಜವಾಬ್ದಾರಿಯಾಗಿದೆ. ರಸ್ತೆಯಲ್ಲಿ ಸಂಚರಿಸುವಾಗ ನಾವು ತೋರುವ ಎಚ್ಚರಿಕೆ ಮತ್ತು ಸಂಯಮವು ನಮ್ಮ ಕುಟುಂಬದ ಭವಿಷ್ಯದ ಜೊತೆಗೆ ಇತರರ ಪ್ರಾಣವನ್ನೂ ರಕ್ಷಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ರಸ್ತೆ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಮ್ಮ ಜೀವದ ಜೊತೆಗೆ ಇತರರ ಜೀವವೂ ಬಹಳ ಮುಖ್ಯ ಎಂಬುದನ್ನು ಪ್ರತಿಯೊಬ್ಬ ವಾಹನ ಸವಾರರು ಅರಿತುಕೊಳ್ಳಬೇಕು. ಅರ್ಜೆಂಟ್ ಎನ್ನುವ ಕಾರಣಕ್ಕೋ ಅಥವಾ ಶೋಕಿಗಾಗಿಯೋ ವಾಹನವನ್ನು ಅತಿಯಾದ ವೇಗದಲ್ಲಿ ಚಲಾಯಿಸುವುದರಿಂದಲೇ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಇಂತಹ ಅಪಘಾತಗಳನ್ನು ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಒನ್-ವೇ ಉಲ್ಲಂಘನೆ ಮತ್ತು ವ್ಹೀಲಿಂಗ್ ಮಾಡುವವರ ವಿರುದ್ಧ ಈಗಾಗಲೇ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.

Aಕ್ರಿಕೆಟಿಗ ಸುನೀಲ್ ಜೋಶಿ ಮಾತನಾಡಿ, ಬೈಕ್ ಓಡಿಸುವಾಗ, ಕಾರು ಚಲಾಯಿಸುವಾಗ ಜನರು ಮೊಬೈಲ್ ಬಳಸುತ್ತಿರುವುದನ್ನು ಗಮನಿಸಿದ್ದೇನೆ. ಇದು ವಾಹನ ಚಲಾಯಿಸುವವರು ಮತ್ತು ಬೇರೆಯವರ ಜೀವಕ್ಕೂ ಅಪಾಯ ಉಂಟು ಮಾಡುತ್ತದೆ. ಯಾವುದೇ ಕಾರಣಕ್ಕೂ ವಾಹನ ಚಾಲನೆ ವೇಳೆ ಮೊಬೈಲ್ ಬಳಸಬೇಡಿ. ತುರ್ತು ಅಗತ್ಯವಿದ್ದರೆ ವಾಹನವನ್ನು ಸುರಕ್ಷಿತವಾಗಿ ಪಕ್ಕಕ್ಕೆ ನಿಲ್ಲಿಸಿ ಮಾತನಾಡಿ ಎಂದು ಸಲಹೆ ನೀಡಿದರು.

13,000 ಜನ ಸೇಫ್ ಎ ಥಾನ್ ನಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್ ವಿ ಪ್ರಸಾದ್ ಆಯುಕ್ತರಾದ ಯೋಗೀಶ್ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಚೇತನ್ , ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಕಾವೇರಿ ಆಸ್ಪತ್ರೆ ಚೇರ್ಮನ್ ವಿಜಯ ಭಾಸ್ಕರನ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Bangalore D karanataka Running Sports ಕರ್ನಾಟಕ
Follow on Facebook Follow on Instagram
Share. Facebook Twitter WhatsApp Telegram
Previous ArticleWhatsApp New Rules : ಮಾರ್ಚ್ 1 ರಿಂದ ವಾಟ್ಸಾಪ್, ಟೆಲಿಗ್ರಾಮ್ ಬಳಕೆಯಲ್ಲಿ ಭಾರಿ ಬದಲಾವಣೆ! ನಿಮ್ಮ ಫೋನ್‌ನಲ್ಲಿ ಸಿಮ್ ಇಲ್ಲದಿದ್ದರೆ ಅಪ್ಲಿಕೇಶನ್ ಬಂದ್?
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

February 27, 2026

ದಿನಾಂಕ 19-02-2026ರ ಗುರುವಾರ ಸಂಜೆ 3:40ಕ್ಕೆ ಯೋಗ ಗುರುಗಳಾದ ಎಲ್.ಎಸ್ .ಚಿನ್ಮಯಾನಂದ ಇವರ ತಾಯಿ ಜಯಮ್ಮನವರು(80 ವರ್ಷ) ದೈವಾಧೀನರಾಗಿರುತ್ತಾರೆ

February 19, 2026

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

February 19, 2026
Add A Comment
Leave A Reply Cancel Reply

Advertisement
Demo
Latest Posts

ವಾಹನ ಚಾಲನೆ ವೇಳೆ ಅವಸರ ಬೇಡ, ಎಚ್ಚರಿಕೆಯಿಂದ ವಾಹನ ಚಲಾಯಿಸಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ*

WhatsApp New Rules : ಮಾರ್ಚ್ 1 ರಿಂದ ವಾಟ್ಸಾಪ್, ಟೆಲಿಗ್ರಾಮ್ ಬಳಕೆಯಲ್ಲಿ ಭಾರಿ ಬದಲಾವಣೆ! ನಿಮ್ಮ ಫೋನ್‌ನಲ್ಲಿ ಸಿಮ್ ಇಲ್ಲದಿದ್ದರೆ ಅಪ್ಲಿಕೇಶನ್ ಬಂದ್?

ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

ದಿನಾಂಕ 19-02-2026ರ ಗುರುವಾರ ಸಂಜೆ 3:40ಕ್ಕೆ ಯೋಗ ಗುರುಗಳಾದ ಎಲ್.ಎಸ್ .ಚಿನ್ಮಯಾನಂದ ಇವರ ತಾಯಿ ಜಯಮ್ಮನವರು(80 ವರ್ಷ) ದೈವಾಧೀನರಾಗಿರುತ್ತಾರೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.