ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ದಿಂದ ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಆರು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲೆ ಮೂ ಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಮೀನಾಕ್ಷಿ ಹಾಗೂ ಬಿ. ಹೊಸಹಳ್ಳಿಯ ಸುಮಿತ್ರೇಗೌಡ ಮೃತ ಪಟ್ಟಿದ್ದಾರೆ. ಸುಮಿತ್ರೇಗೌಡ ಮನೆಯಲ್ಲಿ ಕುಸಿದು ಬಿದ್ದು ಅಸುನೀಗಿದರು.ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಹೃದಯಾ ಘಾತವಾಗಿ ಬೆಂಗಳೂರಿನ ಜಯನಗರದ ನಿವಾಸಿ ರಂಗನಾಥ್ ಅಸುನೀಗಿದ್ದಾರೆ. ಪತ್ನಿ, ಪುತ್ರಿ ಜೊತೆ ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದರು. ಟ್ರಿಪ್ ಮುಗಿಸಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ಎದೆ ನೋವು ಕಾಣಿ ಸಿಕೊಂಡಿತು. ಹಾಸನದ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡಿನ ಆನಂದ್ ಹೃದಯಾಘಾತದಿಂದ ಸಾವನ್ನ ಪ್ಪಿದ್ದಾರೆ. ಭಾನುವಾರ ಮುಂ ಜಾನೆ 4ರ ಸುಮಾರಿಗೆ ತೀವ್ರ ಎದೆನೋವು ಕಾಣಿಸಿದೆ. ಯಾದಗಿರಿ ಜಿಲ್ಲೆಯ ಶೆಟ್ಟಿಕೇರಾ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಅಗ್ನಿ ಕುಂಡ ತುಳಿದ ಕೆಲ ಗಂಟೆಗಳಲ್ಲೇ ಹಳ್ಳೆಪ್ಪ ಪೂಜಾರಿ ಹಠಾತ್ ಹೃದಯಾಘಾತ ದಿಂದ ಮೃತಪಟ್ಟಿ ದ್ದಾರೆ. ಅಗ್ನಿಕುಂಡ ತುಳಿದ ನಂತರ ದೇಗುಲ ಪಕ್ಕದ ಕೊಠಡಿಯಲ್ಲಿ ಕುಳಿತು ನೀರು ಕುಡಿ ಯುವಷ್ಟರಲ್ಲಿ ಕುಸಿದು ಬಿದ್ದಿದ್ದಾರೆ. ಚಾಮ ರಾಜನಗರದಲ್ಲಿ 52 ವರ್ಷದ ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು, ಅಲ್ಲಿಯೇ ಅಸುನೀಗಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



