Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜಕೀಯ»ರಾಜಕಾರಣದಲ್ಲಿ ಇರುವವರು ರಾಜಕಾರಣ ಮಾಡಲೇ ಬೇಕು: ಡಿ ಕೆ ಶಿವಕುಮಾರ್
ರಾಜಕೀಯ

ರಾಜಕಾರಣದಲ್ಲಿ ಇರುವವರು ರಾಜಕಾರಣ ಮಾಡಲೇ ಬೇಕು: ಡಿ ಕೆ ಶಿವಕುಮಾರ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 12, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

*ರಾಜಕಾರಣದಲ್ಲಿ ಇರುವವರು ರಾಜಕಾರಣ ಮಾಡಲೇ ಬೇಕು: ಡಿ ಕೆ ಶಿವಕುಮಾರ್*

*ನನಗೆ ಸದಾ ಯಶಸ್ಸು ಸಿಗುತ್ತದೆ, ಸ್ವಲ್ಪ ಶ್ರಮ ಬೇಕಾಗುತ್ತದೆ*

*ನಾಯಕರ ಜತೆಗಿನ ಚರ್ಚೆ ವಿವರ ಬಹಿರಂಗಪಡಿಸಲಾರೆ*

*ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ಜಾರಿ*

*ಸಂಘರ್ಷವಿರುವುದು ಬಿಜೆಪಿಯಲ್ಲಿ, ನಮ್ಮಲ್ಲಿ ಅಲ್ಲ*

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ಭೇಟಿ ಫಲಪ್ರದವಾಗಿದೆಯೇ, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಿಂದ ಸ್ಪಷ್ಟನೆ ಸಿಕ್ಕಿದೆಯೇ ಎಂದು ಕೇಳಿದಾಗ, “ನಾವು ಈ ವಿಚಾರವಾಗಿ ಚರ್ಚೆ ಮಾಡಿಲ್ಲ. ಪಕ್ಷ ತನ್ನದೇ ಆದ ಗುರಿ ಹೊಂದಿದ್ದು, ಪಕ್ಷದ ಯಶಸ್ಸು ಹಾಗೂ ಪಕ್ಷದ ಹಿತಾಸಕ್ತಿ, ಕರ್ನಾಟಕ ಹಾಗೂ ದೇಶದ ಹಿತದೃಷ್ಟಿ ಆಧಾರದ ಮೇಲೆ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತಾರೆ. ಮಾಧ್ಯಮಗಳು ಹಾಗೂ ಬೇರೆಯವರು ಈ ಭೇಟಿಗೆ ಹೊಸ ರೂಪ, ಬೇರೆ ಬಣ್ಣ ನೀಡುತ್ತಿದ್ದೀರಿ. ನಮಗೆ ಇದರಲ್ಲಿ ವಿಶೇಷವಿಲ್ಲ” ಎಂದರು.

ನೀವು ಬಹಳ ತಾಳ್ಮೆಯಿಂದ ಇದ್ದೀರಿ ಎಂದು ಕೇಳಿದಾಗ, “ತಾಳ್ಮೆ ಕೂಡ ಸಾಕಷ್ಟು ಫಲ ನೀಡುತ್ತದೆ” ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಬಂದ ನಂತರ ಎಲ್ಲರನ್ನೂ ಭೇಟಿ ಮಾಡುತ್ತೇನೆ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ, ಟಿ.ಬಿ. ಜಯಚಂದ್ರ ಸೇರಿದಂತೆ ಎಲ್ಲರನ್ನು ಭೇಟಿ ಮಾಡಿರುವೆ. ರಾಜಕಾರಣಿಗಳು ಭೇಟಿಯಾದಾಗ ರಾಜಕಾರಣ ಚರ್ಚೆ ಮಾಡದೇ ಇರುತ್ತಾರಾ? ರಾಜಕೀಯ ಚರ್ಚೆ ಮಾಡುತ್ತೇವೆ. ಆದರೆ ಆ ಚರ್ಚೆಯ ವಿವರವನ್ನು ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಲಾರೆ. ಕರ್ನಾಟಕದ ಹಿತ ಸೇರಿದಂತೆ ಅಸ್ಸಾಂ, ದೆಹಲಿ ಬಗ್ಗೆ ಚರ್ಚೆ ಮಾಡಿರುತ್ತೇವೆ” ಎಂದಷ್ಟೇ ತಿಳಿಸಿದರು.

ಯತೀಂದ್ರ ಅವರು ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳುತ್ತಿದ್ದಾರೆ ಎಂದಾಗ, “ಅವರು ನಮ್ಮ ಹೈಕಮಾಂಡ್ ಅಲ್ಲವೇ, ಅವರ ಮಾತನ್ನು ನಾವು ಸ್ವೀಕರಿಸಬೇಕು” ಎಂದರು.

ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಏನನ್ನೂ ಮಾತನಾಡುವುದಿಲ್ಲ. ಶಾಸಕರುಂಟು ಹಾಗೂ ಮುಖ್ಯಮಂತ್ರಿಗಳುಂಟು. ಸಿಎಂ ಅವರಿಗೆ ಯಾವ ಮಾರ್ಗದರ್ಶನ ನೀಡಿದ್ದಾರೋ ನನಗೆ ಗೊತ್ತಿಲ್ಲ. ಈ ವಿಚಾರ ನನ್ನ ಜತೆ ಚರ್ಚೆಯಾಗಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳಿಂದ ತಿಳಿಯುತ್ತಿದ್ದೇನೆ ಹೊರತು, ಬೇರೆ ಯಾರು ಈ ಬಗ್ಗೆ ಮಾಹಿತಿ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

*ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ಜಾರಿ*

ಸರ್ಕಾರದ ಸಾವಿರ ದಿನಗಳ ದಾರಿಯ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ನಮಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ ಗ್ಯಾರಂಟಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ” ಎಂದು ತಿಳಿಸಿದರು.

ಮುಂದಿನ ಒಂದು ಸಾವಿರ ದಿನ ಹೇಗಿರಲಿದೆ ಎಂದು ಕೇಳಿದಾಗ, “ಬಹಳ ಪ್ರಕಾಶಮಾನವಾಗಿ, ಬಲಿಷ್ಠವಾಗಿರಲಿದೆ” ಎಂದು ತಿಳಿಸಿದರು.

*ಸಂಘರ್ಷವಿರುವುದು ಬಿಜೆಪಿಯಲ್ಲಿ, ನಮ್ಮಲ್ಲಿ ಅಲ್ಲ*

ಸಿಎಂ ಹಾಗೂ ಡಿಸಿಎಂ ನಡುವಣ ಸಂಘರ್ಷದಿಂದ ಜನರು ನರಳುವಂತಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಸಂಘರ್ಷವಿರುವುದು ಬಿಜೆಪಿಯಲ್ಲೇ ಹೊರತು, ನಮ್ಮ ನಡುವೆಯಲ್ಲ. ನಾನು ಹಾಗೂ ಸಿಎಂ ಇಬ್ಬರೂ ಪಕ್ಷದ ತೀರ್ಮಾನದಂತೆ ನಡೆಯುತ್ತೇವೆ ಎಂದು ಹೇಳಿದ್ದಾರೆ. ಎಲ್ಲಾ ಚರ್ಚೆಗಳು ನಮ್ಮ ನಡುವೆ ಆಗಿದೆ. ಪಕ್ಷ ತೀರ್ಮಾನ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷದ ಜತೆಗೆ ಮೈತ್ರಿ ಉತ್ತಮವಾಗಿದೆ ಆದರೆ ಅಧಿಕಾರ ಹಂಚಿಕೆ ಸಾಧ್ಯವಿಲ್ಲ ಎಂಬ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ, ನಮ್ಮ ಹೈಕಮಾಂಡ್ ನಾಯಕರು ಪ್ರತಿಕ್ರಿಯೆ ನೀಡಲಿದ್ದಾರೆ. ನಾವು ಇದರಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಈ ಬಗ್ಗೆ ಮಾತನಾಡುವುದು ಸರಿಯಲ್ಲ” ಎಂದರು.

Bangalore Congress party goverment ಕಾಂಗ್ರೆಸ್ ಡಿಕೆ ಶಿವಕುಮಾರ್ ರಾಜಕೀಯ
Follow on Facebook Follow on Instagram
Share. Facebook Twitter WhatsApp Telegram
Previous Articleಚಿತ್ರದುರ್ಗ | ನಿವೃತ್ತ ಶಿಕ್ಷಕ ಪಿ. ತಿಪ್ಪೇಶಾಚಾರ್ಯ ನಿಧನ
Next Article ರಾಯಚೂರಿಗೆ 13ನೇ ಕೆಎಸ್‌ಆರ್‌ಪಿ ಪಡೆ ಸ್ಥಾಪನೆಗೆ ಒತ್ತಾಯ ಯುವ ಹೋರಾಟಗಾರ ಅರುಣ್ ಭೂಪಾಲ್ ಅವರಿಂದ ಸಿಎಂಗೆ ಬಹಿರಂಗ ಪತ್ರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಭಟ್ಕಳದಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದಾಗ ಭೀಕರ ದುರಂತ: ವೆಂಕಟಾಪುರ ನದಿಯಲ್ಲಿ ಮುಳುಗಿ 10 ಮಂದಿ ಸಾವು

May 24, 2026

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ? ವಾಹನ ಸವಾರರಿಗೆ ಶಾಕ್ ನೀಡಲು ಸಜ್ಜಾದ ತೈಲ ಕಂಪನಿಗಳು!

May 24, 2026

ಪಿಂಚಣಿ ನಿಲ್ಲಿಸಿ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್‌ಗೆ ಯಾವ ಯೋಗ್ಯತೆ ಇದೆ?: ಆರ್‌.ಅಶೋಕ ಆಕ್ರೋಶ

May 16, 2026
Add A Comment
Leave A Reply Cancel Reply

Advertisement
Latest Posts

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.