ಪವಿತ್ರಾಗೌಡಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ
ಬೆಂಗಳೂರು : ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ ಕಂಬಿ ಎಣಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವಂತಹ ಪವಿತ್ರಾ ಮಧ್ಯಂತರ ಜಾಮೀನು ನೀಡುವಂತೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಗೆ ಪವಿತ್ರಗೌಡ ಪರ ವಕೀಲರು ಅರ್ಜಿ ಸಲ್ಲಿಸಿದರು.
ಆದರೆ ಪವಿತ್ರಗೌಡ ಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಕಾರಿಸಿದೆ. ಮಗಳ ಬೋರ್ಡ್ ಎಕ್ಸಾಂ ಇರುವ ಕಾರಣ 20 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು, ಆದರೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಜಾ ಮಾಡಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಪವಿತ್ರ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
