ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಳಿಸಲು ಒತ್ತಾಯ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ತೆರಳಿದ್ದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ತ್ವರಿತವಾಗಿ ಅಂತಿಮಗೊಳಿಸಲು ಮತ್ತು ವಿಜಯಪುರ ವಿಮಾನ ನಿಲ್ದಾಣವನ್ನು ಕಾರ್ಯರೂಪಕ್ಕೆ ತರಲು ಶೀಘ್ರ ಅನುಮತಿ ನೀಡಲು ಒತ್ತಾಯಿಸಲಾಯಿತು. ಎರಡೂ ರಾಜ್ಯದ ದೀರ್ಘಕಾಲೀನ ಸಂಪರ್ಕ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ನಿರ್ಣಾಯಕವಾಗಿದೆ ಎಂದು ಎಂಬಿ ಪಾಟೀಲ್ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದರು.
ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ಸ್ಥಾನಮಾನ ದರ್ಜೆಗೇರಿಸಬೇಕು. ಇದು ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸುವಂತೆ ತಿಳಿಸಲಾಗಿದೆ. ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ ಆಗುವಂತೆ ಕ್ರಮ ವಹಿಸಲಾಗಿದೆ ಎಂದರು.ಬೆಂಗಳೂರಿನಲ್ಲಿ ಸ್ಪೇಸ್‌ಟೆಕ್ ಕೇಂದ್ರ ಸೇರಿ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆಮೈಸೂರು, ಶಿವಮೊಗ್ಗ, ಹಾಸನ, ಕಾರವಾರ ಮತ್ತು ರಾಯಚೂರುಗಳಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಮತ್ತು ಮೇಲ್ದರ್ಜೆಗೇರಿಸಲು ನೆರವು ನೀಡುವಂತೆ ಕೋರಲಾಗಿದೆ. ಈ ವಿಮಾನ ನಿಲ್ದಾಣಗಳಿಗೆ ಅಂತರರಾಷ್ಟ್ರೀಯ ಸ್ಥಾನಮಾನವು ಹೂಡಿಕೆಯನ್ನು ವೇಗಗೊಳಿಸುತ್ತದೆ. ಇ-ಕಾಮರ್ಸ್ ಮತ್ತು ಲಾಜಿಸ್ಟಿಕ್ಸ್ ಅನ್ನು ಹೆಚ್ಚಿಸುತ್ತದೆ ಮತ್ತು ಬೆಂಗಳೂರಿನಾಚೆಗೆ ಆರ್ಥಿಕ ಬೆಳವಣಿಗೆಯನ್ನು ವಿಕೇಂದ್ರೀಕರಿಸುತ್ತದೆ ಎಂದು ಎಂಬಿ ಪಾಟೀಲ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



