ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಂಬಂಧಿಸಿ ಸರ್ಕಾರ ಸಚಿವ ಸಂಪುಟದ ತೀರ್ಮಾನ ಪ್ರಕಟಿಸಿದ ಬೆನ್ನಲ್ಲೇ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ಶಿಫಾರಸು ಅನ್ವಯ ಮೀಸಲಾತಿ ಹಂಚಿಕೆ ಮಾಡಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮೂರು ಪ್ರವರ್ಗಗಳಾಗಿ ವರ್ಗೀಕರಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.17 ಮೀಸಲಾತಿಯನ್ನು ಪ್ರವರ್ಗ-ಎನಲ್ಲಿರುವಸಮುದಾಯಗಳಿಗೆ ಶೇ.6, ಪ್ರವರ್ಗ-ಬಿನಲ್ಲಿರುವ ಸಮುದಾಯಗಳಿಗೆ ಶೇ.6 ಮತ್ತು ಪ್ರವರ್ಗ-ಸಿನಲ್ಲಿರುವ ಸಮುದಾಯಗಳಿಗೆ ಶೇ.5ರಷ್ಟು ನಿಗದಿಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಈ ಮೂರು ಜಾತಿಗಳು ಪ್ರವರ್ಗ-ಎ ಅಥವಾ ಪ್ರವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು. ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ಒಳಮೀಸಲಾತಿ ಹಿನ್ನೆಲೆಯಲ್ಲಿ ತಡೆಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲುಸಿಬ್ಬಂದಿಮತ್ತು ಆಡಳಿತಸುಧಾರಣೆ ಇಲಾಖೆಯಿಂದಕ್ರಮವಹಿಸಬಹುದುಎಲ್ಲಾ ಇಲಾಖೆಗಳು ಮತ್ತು ಅವುಗಳ ಅಧೀನದ ಎಲ್ಲಾ ನಿಗಮ, ಮಂಡಳಿ, ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಸಹ ಮುಂದುವರೆಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







