ಚಿತ್ರದುರ್ಗ: ನಗರದ ಹೊರ ವಲಯದ ಭೋವಿ ಗುರುಪೀಠದಲ್ಲಿ ನಾಳೆ ನಡೆಯಲಿರುವ ಭೋವಿ ಗುರುಪೀಠದ ಶ್ರೀ ಇಮ್ಮಡಿ
ಸಿದ್ದೇಶ್ವರ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ
ವಸಂತೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರಕ್ಕೆ ಸಕಲ ಸಿದ್ದತೆಯನ್ನು
ಮಾಡಲಾಗಿದೆ.ಕರ್ನಾಟಕ ರಾಜ್ಯವಲ್ಲದೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದಲೂ ಸಹಾ ಭಕ್ತಾಧಿಗಳುಆಗಮಿಸಲಿದ್ದಾರೆ, ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸಹಾ ಭೋವಿ ಸಮಾಜದ ಭಾಂಧವರು ಇಂದು ರಾತ್ರಿಯಿಂದಲೇ ಮಠಕ್ಕೆಆಗಮಿಸಲಿದ್ದಾರೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭಕ್ತಾಧಿಗಳು ಆಸನವಾಗಲು ಸುಮಾರು 5 ಸಾವಿರ ಕುರ್ಚಿಗಳನ್ನುಹಾಕಲಾಗಿದೆ. ಮುಖ್ಯ ಅತಿಥಿಗಳು ಹಾಸನವಾಗಲು ಆಗಲವಾದ ವೇದಿಕೆಯನ್ನು ಸಹಾ ಸಿದ್ದ ಪಡಿಸಲಾಗಿದೆ. ಈಗಮಳೆಗಾಲವಾಗಿರುವುದರಿಂದ ಮಳೆ ಬಂದು ಕಾರ್ಯಕ್ರಮ ಹಾಳಾಗಬಾಗರೆಂದು ಮಳೆಯಲ್ಲಿ ಸೋರದ ಜರ್ಮನ್ ಚಪ್ಪರವನ್ನುಹಾಕಿಸಲಾಗಿದೆ ಎಂದರು.ಈ ಸಂಧರ್ಭದಲ್ಲಿ ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ ಮಾತನಾಡಿ ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಶಿಕ್ಷಣದ ಕಡೆಗೆಹೆಚ್ಚಿನ ಒಲವನ್ನು ಸೆಳೆಯುವ ಸಲುವಾಗಿ ಈ ಕಾರ್ಯಕ್ರಮದಲ್ಲಿ ಎಸ್.ಎಸ್. ಎಲ್.ಸಿಯಿಂದ ಹಿಡಿದು ಪದವಿ ಪಡೆದಸಂಶೋಧನಯನ್ನು ಮಾಡಿದವರನ್ನು ಈ ಸಮಯದಲ್ಲಿ ಸನ್ಮಾನಿಸ ಲಾಗುವುದು, ಇದ್ದಲ್ಲದೆ ಭೋವಿ ಸಮುದಾಯದಲ್ಲಿ ಮದುವೆಯವಯಸ್ಸು ಮೀರುತ್ತಿದೆ ಇದನ್ನು ಮನಗಂಡು ಈ ಕಾರ್ಯಕ್ರಮದಲ್ಲಿ ಮಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇಲ್ಲಿ ಭೋವಿಸಮುದಾ ಯದವರು ತಮ್ಮ ಮಕ್ಕಳಿಗೆ ಗಂಡು, ಹೆಣ್ಣನ್ನು ನೋಡಿಕೊಳ್ಳಬಹುದಾಗಿದೆ. ಇದಕ್ಕೆ ಅವಕಾಶವನ್ನು ಕಲ್ಪಿಸಲಾ ಗಿದೆ.
ಇದರೊಂದಿಗೆ ಉಚಿತವಾದ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು ಇಲ್ಲಿಗೆ ಆಗಮಿಸಿದ ಭಕ್ತಾಧಿ ಗಳು ತಮ್ಮ ಆರೋಗ್ಯದಕಾಳಜಿಯನ್ನುವಹಿಸಿ ತಪಾಸಣೆಯನ್ನು ಮಾಡಿಸಿಕೊಳ್ಳ ಬಹುದಾಗಿದೆ.ಶ್ರೀ ಮಠ ಬಹು ದಿನಗಳಿಂದ ರಕ್ತದಾನದ ಶಿಬಿರಗಳನ್ನು ಮಾಡುತ್ತಾ ಬಂದಿದೆ ಇದುವರೆವಿಗೂ ಶೀಮಠದ ಆಶ್ರಯದಲ್ಲಿ 10ಸಾವಿರಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಗಿದೆ. ಈ ಭಾರಿಯೂ ಸಹಾ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜು. 18 ರಂದು
ಬೆಳಿಗ್ಗೆಯಿಂದ ಸಂಜೆಯವರೆಗೂ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದೆ. ಮುಂಜಾನೆ ರಾಜ್ಯದ ವಿವಿಧ ಮಠಾಧೀಶರಿಂದಧಾರ್ಮಿಕ ಸಭೆ ನಡೆಯಲಿದೆ. ಇದರಲ್ಲಿ ಸಮುದಾಯ ಆಗು ಹೋಗುಗಳ ಬಗ್ಗೆ ಚರ್ಚೆ ನಡೆಯಲಿದೆ. ಇದಾದ ಮೇಲೆ, ಮಾಯಾವಿಹಾಗೂ ಹೆಚ್ಚೆಮ್ಮ ಚಲನಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ ಇದಾದ ಮೇಲೆ ಭೋವಿ ಸಮುದಾಯದ ಜಾಗೃತ ಸಭೆ ನಡೆಯಲಿದ್ದು,ನಂತರ ವಧು-ವರರ ಸಮಾವೇಶ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ದಾಸೋಹದ ವ್ಯವಸ್ಥೆಯನ್ನು ಮಾಡಲಾಗಿದೆ ಇದಕ್ಕಾಗಿ 25 ಕೌಂಟರ್‍ಗಳನ್ನು
ತೆರೆಯಲಾಗಿದೆ, ಭಕ್ತಾಧಿಗಳು ಹೊಟ್ಟೆ ತುಂಬುವಂತ ಆಹಾರವನ್ನು ನೀಡಲಾಗುವು ಜುಲೈ 17ರ ರಾತ್ರಿ ಬಂದು ತಂಗುವವರಿಗೆ ಶ್ರೀಮಠಹಾಗೂ ಮುರುಘಾ ಮಠದಲ್ಲಿ ವ್ಯವಸ್ಥೆಯನ್ನು ಮಾಡಲಾಗಿದೆ, ಜು. 18ರ ಬೆಳಿಗ್ಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು. ಕಣ್ಣ್ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವ ಅರವಿಂದ ಲಿಂಬಾವಳಿ,ವಿಧಾನಪರಿಷತ್ತಿನ ವಿರೋಧ ಪಕ್ಷದ ಉಪ ನಾಯಕ ಸುನೀಲ್ ವಲ್ಯಾಪುರ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಸೇರಿದಂತೆ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ ಎಂದರು. ಇದೆ ವೇಳೆ ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಶ್ರೀ ಭೋವಿ ಗುರುಪೀಠದ
ಕಾರ್ಯ ನಿರ್ವಹಣಾಧಿಕಾರಿಗಳಾದ ಗೌನಹಳ್ಳಿ ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



