ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ನವೆಂಬರ್ ತಿಂಗಳೊಳಗೆ ಮುಗಿಯಲಿದೆ. ಅಲ್ಲಿಯ ಚುನಾವಣೆ ನಂತರ ರಾಜ್ಯ ರಾಜಕಾಣದಲ್ಲಿ ದೊಡ್ಡ ಸ್ಥಿತ್ಯಂತರ ಘಟಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ತಮ್ಮ ತಮ್ಮ ನಡೆಗಳನ್ನು ಹೊಂದಿದ್ದಾರೆ. ಆದರೆ ಶಾಸಕರ ನಡೆಯೇ ಬೇರೆ ಕಡೆ ಇದೆ ಎಂದು ವ್ಯಂಗ್ಯವಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದ ರೈತರು ತತ್ತರಿಸಿದ್ದಾರೆ. ರಾಜ್ಯ ಸರಕಾರಕ ಆ ಬಗ್ಗೆ ಗಮನಹರಿಸದೆ ನಿಷ್ಕಾಳಜಿ ವಹಿಸಿದೆ. ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ರಾಜಕೀಯ ಅವಕಾಶಗಳ ಬಗ್ಗೆ ನೋಡೋಣ. ಆದರೆ ಬಿಜೆಪಿ ಪಕ್ಷ ಸಮರ್ಥ ವಿರೋಧ ಪಕ್ಷವಾಗಿ ಆಡಳಿತ ನಡೆಸುತ್ತಿದೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







