ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಬಿಜೆಪಿ ಭಿನ್ನರ ದೆಹಲಿ ಭೇಟಿ, ದಾವಣಗೆರೆಯಲ್ಲಿನ ಬಿಜೆಪಿ ಸ್ಥಳೀಯ ನಾಯಕರ ನಡುವಿನ ಬಣ ರಾಜಕೀಯದ ನಡುವೆಯೇ ದಾವಣಗೆರೆಯ ಬಿಜೆಪಿ ಟೀಂ ದೆಹಲಿಗೆ ಭೇಟಿ ನೀಡಿದೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ಈ ತಂಡದಲ್ಲಿ ದಾವಣಗೆರೆ ಜಿಲ್ಲಾಧ್ಯಕ್ಷ ರಾಜ ಶೇಖರ್ ಸೇರಿ 8 ಮಂದಿಯಿದ್ದಾರೆ. ತಮ್ಮ ದೆಹಲಿ ಭೇಟಿಯ ವೇಳೆ ತಂಡದ ಸದಸ್ಯರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ದಂತೆ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ. ಭೇಟಿ ವೇಳೆ, ತಂಡದ ಸದಸ್ಯರು ದಾವಣಗೆರೆ ಜಿಲ್ಲೆಯ ಬಿಜೆಪಿ ಗಲಾಟೆ ಸೇರಿ ಹಲವು ವಿಚಾರ ಗಳನ್ನು ಹೈಕಮಾಂಡ್ಗೆ ತಿಳಿಸಲಿದ್ದಾರೆ. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನೇ ಮುಂದುವರಿಸಲು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



