ಮೈಸೂರು: ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷ ಗಳ ಟೀಕೆ ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಬಳಿಕ ಮಾತನಾಡಿದರು.ನಮ್ಮ ಗ್ಯಾರಂಟಿ ದೇಶಕ್ಕೇ ಮಾದರಿ. ಪ್ರಧಾನಿಯಿಂದ ಹಿಡಿದು ರಾಜ್ಯ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕಿಸಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿ ಬೇರೆ ರಾಜ್ಯಗಳ ಚು ನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಘೋಷಿಸಿದರು. ಬಿಹಾರದ ಲ್ಲೂ ನಕಲು ಮಾಡಿ ದ್ದಾರೆ ಎಂದು ಟೀಕಿಸಿದರು.
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



