ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಅವಹೇಳನಕಾರಿಹೇಳಿಕೆ ಪ್ರಕರಣ ಸಂಬಂಧ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರನ್ನು ಧ್ವನಿ ಪರೀಕ್ಷೆಗೊಳಪಡಿಸಲು ವಿಧಾನ ಸೌಧ ಠಾಣೆ ಪೊಲೀಸರು ಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.ವಿಧಾನಸೌಧ ಹೊರಾವರಣದಲ್ಲಿ ಶಾಲಿನಿ ರಜನೀಶ್ ಅವರ ಕುರಿತು ಅಗೌರವಯುತವಾಗಿ ಮಾತನಾಡಿದ ಆರೋಪದ ಮೇರೆಗೆ ರವಿಕುಮಾರ್ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಅವರಿಗೆ ನ್ಯಾಯಾಲಯವು ನಿರೀಕ್ಷಣಾಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ರವಿಕುಮಾರ್ ಅವರಿಗೆ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಅಲ್ಲದೆ ಮುಖ್ಯ ಕಾರ್ಯದರ್ಶಿ ಅವರನ್ನು ನಿಂದಿಸಿದ ವಿಡಿಯೋ ಸಂಗ್ರಹಿಸಿರುವ ಪೊಲೀಸರು, ಅ ವಿಡಿಯೋದಲ್ಲಿರುವ ದನಿ ರವಿಕುಮಾರ್ ಅವರದ್ದೇ ಎಂಬುದು ಖಚಿತ ಪಡಿಸಿಕೊಳ್ಳಲು ಧ್ವನಿ ಪರೀಕ್ಷೆಗೆ ಮುಂದಾಗಿದ್ದಾರೆ.ಈ ಧ್ವನಿ ಪರೀಕ್ಷೆ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವ ಬಗ್ಗೆ ಕಾನೂನು ತಜ್ಞರಅಭಿಪ್ರಾಯವನ್ನು ಪೊಲೀಸರು ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



