ಚಿತ್ರದುರ್ಗ: ರಾಜ್ಯದಲ್ಲಿ ಯೂರಿಯ ಗೊಬ್ಬರಕ್ಕೆ ರೈತರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ರೈತರಿಗೆ ಗೊಬ್ಬರ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದಿಂದ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ರೈತ ಮೋರ್ಚಾದ ವೆಂಕಟೇಶ್ ಯಾದವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಇದೆ ವೇಳೆ ವೆಂಕಟೇಶ್ ಯಾದವ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಸರ್ಕಾರ ರೈತರ ಪರ ಎಂದು ಸುಳ್ಳು ಹೇಳಿಕೊಂಡು ಲೂಟಿ ಮಾಡುತ್ತಿದೆ. ಇದುವರೆಗೆ ರೈತರಿಗೆ ಸರಿಯಾದ ಸಮಯಕ್ಕೆ ಯೂರಿಯ ಗೊಬ್ಬರ ಸಿಕ್ಕಿಲ್ಲ, ದಿನನಿತ್ಯ ರೈತರು ಗೊಬ್ಬರಕ್ಕಾಗಿ ಪರದಾಟ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದರು. ಇನ್ನು ಮಾಜಿ ಶಾಸಕ ಜಿ ಎಸ್ ತಿಪ್ಪಾರೆಡ್ಡಿ ಮಾತನಾಡಿ ಸಿದ್ದರಾಮಯ್ಯ ಮಾತು ಎತ್ತಿದ್ರೆ ರೈತರ ಪರ ನಾನು ಎಂದು ಬೊಗಳೆ ಬಿಡ್ತಾರೆ. ಈಗ ಕೇಂದ್ರದ ಕಡೆ ಬೆರಳು ತೋರಿಸಿ ನಮ್ಮದು ತಪ್ಪಿಲ್ಲ ಅಂತ ನುಣುಚಿಕೊಳ್ಳುವ ಕೆಲಸ ಮಾಡ್ತಿದ್ದಾರೆ. ಈ ನಾಟಕ ಎಲ್ಲಾ ಬಿಟ್ಟು ಸರ್ಕಾರ ರೈತರಿಗೆ ಯೂರಿಯ ಗೊಬ್ಬರ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ ಸೇರಿದಂತೆ ಮುಖಂಡರು ಭಾಗಿ ಆಗಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



