ಚಿತ್ರದುರ್ಗ : ಒಳ ಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ ಆಗಸ್ಟ್ ಗೆ ಒಂದು ವರ್ಷ ಪೂರೈಸುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಟಾನಕ್ಕೆ ತರಲು ಮೀನಾಮೇಷ ಎಣಿಸುತ್ತಿರುವುದರಿಂದ ಆಗಸ್ಟ್ 1ರಂದುಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ದಲಿತ ಮುಖಂಡ ಚಳ್ಳಕೆರೆ ಶ್ರೀನಿವಾಸ್ ತಿಳಿಸಿದರು.ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿಸಂಸದ ಎ.ನಾರಾಯಣಸ್ವಾಮಿರವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನಾಲ್ಕರಿಂದ ಐದು ಸಾವಿರ ಜನ ಸೇರುವನಿರೀಕ್ಷೆಯಿಂದ ಪ್ರತಿ ತಾಲ್ಲೂಕಿನಿಂದಲೂ ಮಾದಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆಮನವಿ ಮಾಡಿದರು.ಒಳ ಮೀಸಲಾತಿ ಜಾರಿಗಾಗಿ ಕಳೆದ 35 ವರ್ಷಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾದಿಗರನ್ನುವಂಚಿಸುತ್ತ ಬರುತ್ತಿರುವುದರಿಂದ ಈ ಬಾರಿ ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ರಾಜ್ಯ
ಸರ್ಕಾರಕ್ಕೆ ಎಚ್ಚರಿಸಿದರು.ಜಿ.ಹೆಚ್.ಮೋಹನ್‍ಕುಮಾರ್ ಮಾತನಾಡಿ ಮೂರವರೆ ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಅರೆಬೆತ್ತಲೆ ಮೆರವಣಿಗೆ, ಹೋರಾಟ, ಚಳುವಳಿಗಳನ್ನು ಮಾಡಿದ್ದೇವೆ. ಮಾದಿಗರ ಮತಗಳನ್ನು ಪಡೆದಿರುವ ಕಾಂಗ್ರೆಸ್ ಪಕ್ಷ ನಮ್ಮನ್ನುನಡು ಬೀದಿಯಲ್ಲಿ ನಿಲ್ಲಿಸಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವಂತೆ ತೀರ್ಪು ನೀಡಿ ಆ.1 ಕ್ಕೆ ಒಂದುವರ್ಷವಾಗುತ್ತದೆ. ಹಾಗಾಗಿ ಅಂದೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆಂದರು.
2008 ರಲ್ಲಿ ಸದಾಶಿವ ಆಯೋಗವನ್ನು ರಚಿಸಲಾಯಿತು. ಈಗ ದತ್ತಾಂಶ ಸಂಗ್ರಹಕ್ಕಾಗಿ ನಾಗಮೋಹನ್‍ದಾಸ್ ಆಯೋಗವನ್ನುರಚಿಸಿದೆ. ಇದು ಮಾದಿಗರ ಬೇಡಿಕೆಯಲ್ಲ.ಆದ್ದರಿಂದ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸಲು ಆ.1 ರಂದು ಬೆಳಿಗ್ಗೆ 10-30 ಕ್ಕೆ ನಗರದ ಹಳೆ ಮಾಧ್ಯಮಿಕ ಶಾಲಾಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಆ.11 ರಿಂದ ಆರಂಭಗೊಳ್ಳುವ ಅಧಿವೇಶನದಲ್ಲಿಒಳ ಮೀಸಲಾತಿ ಕುರಿತು ವರದಿ ಮಂಡನೆ ಚರ್ಚೆಯಾಗಬೇಕು. ಮುಂದೂಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟನಡೆಸಲಾಗುವುದೆಂದು ಹೇಳಿದರು.ಚನ್ನಗಾನಹಳ್ಳಿ ಮಲ್ಲೇಶ್ ಮಾತನಾಡಿ ಮಾದಿಗರ ಮತಗಳನ್ನು ಪಡೆದು ಅಧಿಕಾರದಲ್ಲಿ ಕುಳಿತಿರುವ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದಿರುವುದನ್ನು ವಿರೋಧಿಸಿ ಆ.1 ರಂದು ಪ್ರತಿಭಟನೆಗೆ ಮುಂದಾಗಿದ್ದೇವೆ. ನಮ್ಮ ಸಮುದಾಯ ಇನ್ನಾದರೂ
ಎಚ್ಚೆತ್ತುಕೊಂಡು ಹೋರಾಟಕ್ಕೆ ಬರಬೇಕೆಂದು ವಿನಂತಿಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ ಮಾತನಾಡುತ್ತ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತದೆ. ರಾಜ್ಯ ಸರ್ಕಾರ ಇನ್ನು ದತ್ತಾಂಶ ಸಂಗ್ರಹದ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ಪರಶುರಾಂ, ಪ್ರಹ್ಲಾದ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



