ಬೆಂಗಳೂರು: ರಸಗೊಬ್ಬರ ಇಲಾಖೆ,ಕಾರ್ಖಾನೆಗಳು ನಮ್ಮ ಬಳಿ ಇವೆಯೇ ಎಂದು ಪ್ರಶ್ನಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿ ಯವರು ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ..? ಅವರು ಕೊಟ್ಟಿದ್ದನ್ನು ಹಂಚುವುದಷ್ಟೇ ನಮ್ಮ ಕೆಲಸ. ಗೊಬ್ಬರ ಕೊಡಲಾಗದೆ ರೈತರ ಮೇಲೆ ಬಿಜೆಪಿಯವರು ಗುಂಡು ಹಾರಿಸಿದ್ದರು. ಅಂತಹ ಕೆಲಸ ನಾವು ಮಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.ಮಳೆ ಹೆಚ್ಚಾಗಿರುವ ಕಾರಣ ಭಾರೀ ಪ್ರಮಾ ಣದಲ್ಲಿ ಕೃಷಿ ಚಟುವಟಿಕೆ ಆಗಿದೆ. ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಕೇಂದ್ರಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂಬುದನ್ನು ಸಂಸದರೂ ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ. ಬಿಜೆಪಿ ಯವರು ಅವರದೇ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡ ಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ..? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



