ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಇನ್ನೂ ಇದೇ ವೇಳೆ ಯಾದಗಿರಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







