ಚಿತ್ರದುರ್ಗ: ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಖಾಸಗಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಾಳದ ಘಟನೆ ನಡೆದಿದೆ.ಖಾಸಗಿ ಬಸ್ ಬ್ರೇಕ್ ಫೇಲ್ ಆಗಿ ಎದುರುಗಡೆ ಬರ್ತಿದ್ದ ಅಟೋ ಹಾಗೂ ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋದಲ್ಲಿದ್ದ ಪೂಜಾ, ಮಹಾಂತೇಶ್, ನಿಂಗರಾಜ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅಟೋ ಚಾಲಕ ನಿಂಗರಾಜ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯಲಾಗಿದೆ. ಇನ್ನು ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



