ಯುಗಾದಿ ಜೂಜಾಟ ಚಿತ್ರದುರ್ಗ ಜಿಲ್ಲೆ ಯಲ್ಲಿ ವಶಪಡಿಸಿ ಕೊಂಡ ಹಣ ಎಷ್ಟು
ಚಿತ್ರದುರ್ಗ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂಜಾಟ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ.
ಮಾ. 17 ರಿಂದ 21 ರವರೆಗೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 230 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಅವಧಿಯಲ್ಲಿ 1,189 ಆರೋಪಿತರನ್ನು ಪೊಲೀಸರು ಬಂಧಿಸಿದ್ದು, ಒಟ್ಟು ₹15,48,925 ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
