ಹೊಳಲ್ಕೆರೆ : ಜಾತಿ ರಾಜಕಾರಣ ಮಾಡಲು ಬಂದಿಲ್ಲ. ನಿಯತ್ತಾಗಿ ಕ್ಷೇತ್ರದ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ
ಶ್ರಮಿಸುತ್ತಿದ್ದೇನೆ. ನನಗಿಂತ ಹಿಂದೆ 29 ಶಾಸಕರು ಬಂದು ಹೋಗಿದ್ದಾರೆ. ಅವರೆಲ್ಲಾ ಏನು ಮಾಡಿದರು. ಐದು ವರ್ಷ ಸಚಿವರಾಗಿದ್ದವರಿಂದ ಯಾವಅಭಿವೃದ್ದಿಯಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಜನತೆಯನ್ನು ಪ್ರಶ್ನಿಸಿದರು…?
ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ 1.75 ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿ ಮತ್ತು ನೂತನ ಸಿ.ಸಿ.ರಸ್ತೆ
ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.ನೂರು ವರ್ಷಗಳ ಕಾಲ ಬೋರ್‍ವೆಲ್‍ಗಳಲ್ಲಿ ನೀರು ಬತ್ತುವುದಿಲ್ಲ. ಕೆರೆ ಕಟ್ಟೆಗಳು ತುಂಬಿರುತ್ತವೆ. 493 ಹಳ್ಳಿಗಳಲ್ಲಿಯೂ ಸಿ.ಸಿ.ರಸ್ತೆಮಾಡಿಸಿದ್ದೇನೆ. ಸಾಸಲು ಸರ್ಕಲ್‍ನಿಂದ ಹಿರೇಬೆನ್ನೂರು ಸರ್ಕಲ್‍ವರೆಗೆ ರಸ್ತೆಗೆ ನೂರು ಕೋಟಿ ರೂ.ಗಳನ್ನು ನೀಡಿದ್ದೇನೆ.
ರಾಜ್ಯದಲ್ಲಿನಮ್ಮ ಸರ್ಕಾರವಿಲ್ಲ. ನಾನು ಮಂತ್ರಿಯಲ್ಲ. ಆರ್ಡಿನರ್ ಎಂ.ಎಲ್.ಎ. ನಿಮ್ಮ ಮನೆ ಮಗನಾಗಿ ಕಷ್ಟ ಪಟ್ಟು ಕೆಲಸ ಮಾಡುತ್ತಿದ್ದೇನೆ.ಎಲ್ಲಿಯೂ ಗದ್ದಲ ಗಲಾಟೆಗೆ ಅವಕಾಶ ಕೊಟ್ಟಿಲ್ಲ. ಅಟ್ರಾಸಿಟಿ ಕೇಸು ದಾಖಲಾಗಲು ಬಿಟ್ಟಿಲ್ಲ. ಜಾತಿಗಿಂತ ನೀತಿ ಮುಖ್ಯ. ಎಲ್ಲರೂನನ್ನವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ತಾಲ್ಲೂಕಿನಲ್ಲಿ ಹದಿನೇಳು ಕಡೆ ವಿದ್ಯುತ್ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಐದುನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ನಿರ್ಮಾಣವಾಗಲಿದೆ. ಜೋಗ್‍ಫಾಲ್ಸ್‍ನಿಂದ ಇಲ್ಲಿಗೆ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ಇನ್ನು ಐವತ್ತು ವರ್ಷಗಳಕಾಲ ರೈತರಿಗೆ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.
ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಕೊಡಲು 367 ಕೋಟಿರೂ.ಗಳನ್ನು ಖರ್ಚು ಮಾಡುತ್ತಿದ್ದೇನೆ.
ಎಲ್ಲಿ ಏನು ಅಭಿವೃದ್ದಿ ಕೆಲಸಗಳನ್ನು ಮಾಡಿದರೆ ಜನರಿಗೆ ಒಳ್ಳೆಯದಾಗುತ್ತದೆಂಬಅರಿವಿಟ್ಟುಕೊಂಡಿದ್ದೇನೆ. ಯಾರಿಂದಲೂ ಏನನ್ನು ಹೇಳಿಸಿಕೊಂಡು ಕೆಲಸ ಮಾಡುವವನಲ್ಲ ಈ ಚಂದ್ರಪ್ಪ ಎಂದು ಎದೆ ತಟ್ಟಿಧೈರ್ಯವಾಗಿ ಎಲ್ಲಿ ಬೇಕಾದರೂ ಹೇಳುತ್ತೇನೆಂದು ಜನತೆಗೆ ಭರವಸೆ ನೀಡಿದರು.ಬಿಜೆಪಿ.ಮುಖಂಡ ಜಗದೀಶ್ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಶಾಸಕರುಗಳಿಗೆ ಅನುದಾನ ತರಲುಆಗುತ್ತಿಲ್ಲ. ಅಂತಹ ಕಷ್ಟದ ಪರಿಸ್ಥಿತಿಯಲ್ಲಿ ನಮ್ಮ ಶಾಸಕ ಡಾ.ಎಂ.ಚಂದ್ರಪ್ಪನವರು ಹೇಗೆ ಹಣ ತಂದುಅಭಿವೃದ್ದಿಪಡಿಸುತ್ತಿದ್ದಾರೆನ್ನುವುದೇ ಆಶ್ಚರ್ಯ. ಪ್ರತಿ ಹಳ್ಳಿಗಳಲ್ಲಿಯೂ ಗುಣ ಮಟ್ಟದ ಸಿ.ಸಿ.ರಸ್ತೆ, ಕೆರೆ ಕಟ್ಟೆ, ಚೆಕ್‍ಡ್ಯಾಂಗಳನಿರ್ಮಾಣವಾಗಿದೆ. ಐದನೆ ಸಾರಿ ಗೆದ್ದಿರುವ ಅವರಿಗೆ ಅನುದಾನ ಹೇಗೆ ತರಬೇಕೆಂಬ ಚಾಣಾಕ್ಷತನವಿದೆ ಎಂದು ಗುಣಗಾನ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



