ಜನರಲ್ಲಿ ಗೊಂದಲ ಮೂಡಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಜಾತಿ ಸಮೀಕ್ಷೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 60 ಪ್ರಶ್ನೆಗಳನ್ನು ಜಾತಿ ಸಮೀಕ್ಷೆ ಮೂಲಕ ಜನರ ಮುಂದಿಟ್ಟಿದ್ದಾರೆ. ತಮ್ಮ ಮನೆಯ ಜಾತಿ ಸಮೀಕ್ಷೆ ವೇಳೆ ಡಿಸಿಎಂ ಡಿಕೆಶಿ ಅವರ ಪ್ರತಿಕ್ರಿಯೆ ನೋಡಿದರೇನೆ ಸರಕಾರದ ಅವ್ಯವಸ್ಥೆ ತಿಳಿಯಬಹುದು. ಇಷ್ಟೊಂದು ಆತುರಾತುರವಾಗಿ ಸಿಎಂ ಅವರಿಗೆ ಜಾತಿ ಸಮೀಕ್ಷೆ ಕುರಿತು ಅವಸರ ಏಕೆ? ಎಂದು ವಾಗ್ದಾಳಿ ನಡೆಸಿದ ಅವರು, ಇದು ಜನರಲ್ಲಿ ಗೊಂದಲ ಮೂಡಿಸುವ ಸ್ಪಷ್ಟ ವಿಚಾರಗಳನ್ನು ಹೊಂದಿದೆ ಎಂದು ಚಾಟಿ ಬೀಸಿದರು. ಭಾರತ ಎಂದು ಕಂಡಿರದಂತಹ ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥ ಆಡಳಿತ ನೀಡುತ್ತಿದ್ದಾರೆ. ಅವರು ಎಲ್ಲ ರಾಜ್ಯಗಳಲ್ಲಿ ಜಾತಿ ಸಮೀಕ್ಷೆ ನಡೆಸುವ ಬಗ್ಗೆ ಹೇಳಿದ್ದರು. ಇಂಥದ್ದರಲ್ಲಿ ಸಿಎಂ ಸಿದ್ದರಾಮಯ್ಯ ಹೀಗೆ ಅವಸರವಾಗಿ ಅಂಗವಿಕರನ್ನು ಸಮೀಕ್ಷೆಗೆ ನಿಯೋಜಿಸಿ ಗಣತಿ ನಡೆಸುವ ಆತುರ ಏನಿತ್ತು? ಎಂದು ವಿಜಯೇಂದ್ರ ದಾಳಿ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







