ಹುಬ್ಬಳ್ಳಿ : ನಗರದ ಕುಮಾರ್ ಪಾರ್ಕ್ ಬಳಿ ಇಂದು ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನುತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.ಸ್ವತಃ ಸಚಿವ ಜೋಶಿಯವರೇಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಮೇಲೆತ್ತಲು ಕೈಜೋಡಿಸಿದ್ದಲ್ಲದೆ, ಗಾಯಾಳುವಿಗೆ ಧೈರ್ಯ ತುಂಬುವ ಕೆಲಸ ಸಹ ಮಾಡಿದರು. ಬಳಿಕಗಾಯಾಳುವಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.ಸ್ಥಳದಲ್ಲಿದ್ದ ಜನರು ಸಚಿವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



