ಚಳ್ಳಕೆರೆ: ಬೆಟ್ಟಿಂಗ್ ಆ್ಯಪ್ ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಡಿ ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 10.30 ಗಂಟೆಗೆ ಸುಮಾರು 10ಕ್ಕೂ ಹೆಚ್ಚು ಮಂದಿ ಇಡಿ ಅಧಿಕಾರಿಗಳು CRPF ಸಿಬ್ಬಂದಿಯೊಂದಿಗೆ 4 ಇನೋವಾ ಕಾರುಗಳಲ್ಲಿ ದಾಳಿ ನಡೆಸಿದ್ದಾರೆ. ಚಳ್ಳಕೆರೆ ನಗರದ ಹಳೆ ಟೌನ್ ನಲ್ಲಿರು ಪಪ್ಪಿ ಮನೆ ಹಾಗೂ ವಿವಿಧ ಕಡೆಗಳಲ್ಲಿ ಪಪ್ಪಿ ಹೊಂದಿರುವ 17 ಖಾತೆಗಳ ಪರಿಶೀಲನೆ ಸಲುವಾಗಿ ನಗರದ ಕೋಟ್ಯಾಕ್ ಮಹಿಂದ್ರ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಪೆಡರಲ್ ಬ್ಯಾಂಕ್, ವೀರಶೈವ ಸೌಹಾರ್ದ ಪತ್ತಿನ ಸಹಕಾರ ಸಂಘ ಬ್ಯಾಂಕ್ಗಳಲ್ಲಿ ಹೆಚ್ಚಿನ ಮಾಹಿತಿಗಾಗಿ ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







