ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅರ್ಧದಷ್ಟು ಶಾಸಕರು ಚಳ್ಳಕೆರೆ ಭಾಗದವರೇ ಇದ್ದಾರೆ. ಅದರಲ್ಲೂ ಅಷ್ಟು ಮಂದಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ ಅವರನ್ನು ಎದುರಿಸಿ ನಾವು ಇಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿಬೇಕು ಎಂದು ಸಂಸದ ಗೋವಿಂದ ಕಾರಜೋಳ ಕರೆ ನೀಡಿದರು.
ಚಳ್ಳಕೆರೆ ಪಟ್ಟಣ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ ಅಭಿನಂದನಾ ಸಮಾರಂಭದಲ್ಲಿ ಮಾತಮಾಡಿದ ಅವರು, ಚಿತ್ರದುರ್ಗ ಶಾಸಕರ ವೀರೇಂದ್ರ ಪಪ್ಪಿ, ರಘುಮೂರ್ತಿ ಚಳ್ಳಕೆರೆಯವರು, ಇವರಲ್ಲಿ ಒಬ್ಬರಲ್ಲ ಒಬ್ಬರ ಕಾಟ ನಿಮಗೆ ಇದ್ದೆ ಇರುತ್ತದೆ. ಇವರಿನ್ನು ಎದುರಿಸಿ ಬಿಜೆಪಿ ಇಲ್ಲಿ ಅಧಿಕಾರಕ್ಕೆ ಬಂದುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆದರೂ ರಾಜ್ಯದಲ್ಲಿ ಏನು ಅಭಿವೃದ್ಧಿ ಆಗಿಲ್ಲ. ಯಾವೊಬ್ಬ ಶಾಸಕರಿಗೆ ಅನುದಾನ ಸಿಕ್ಕಿಲ್ಲ, ಸಿಗುವುದು ಇಲ್ಲ ಅನ್ಸುತ್ತೆ. ನಮ್ಮ ಸರ್ಕಾರದಲ್ಲಿ ಆಗಿರುವ ಯೋಜನೆಗಳನ್ನು ಪೂರ್ಣ ಮಾಡೋಕೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದೆ ವೇಳೆ ಬಿಜೆಪಿ ಶಾಸಕರು ಮುಖಂಡರು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



