ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾನೂನು ಪ್ರಕಾರ, ಏನು ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಾಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ ಎಸ್‌ಐಟಿ ತನಿಖೆಯನ್ನು ಮುಂದುವರೆಸಬಹುದೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದರು.’ಕೇಂದ್ರದಲ್ಲಿ ಸೇವೆ ಸಲ್ಲಿಸಬೇಕಾಗಿ ಬಂದರೆ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಅವರು ಮುಂದುವರಿಯಬಹುದೇ ಅಥವಾ ಅವರನ್ನು ಬದಲಾಯಿಸಬೇಕೇ ಎಂಬ ಬಗ್ಗೆ ನಾವು ಚರ್ಚಿಸುತ್ತೇವೆ. ಕಾನೂನು ಅನುಮತಿಸಿದರೆ ಅವರು ಎಸ್‌ಐಟಿ ಮುಖ್ಯಸ್ಥರಾಗಿ ಮುಂದುವರಿಯಬಹುದು. ಒಂದು ವೇಳೆ ಅವರನ್ನು ಬದಲಿಸಬೇಕಾಗಿ ಬಂದರೆ, ಸರ್ಕಾರ ಅದೇ ಶ್ರೇಣಿಯ ಅಧಿಕಾರಿಯನ್ನು ನೇಮಿಸುತ್ತದೆ’ ಎಂದು ಪರಮೇಶ್ವರ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಸ್‌ಐಟಿ ತನಿಖೆ ಕುರಿತು ಕೇಳಿದಾಗ, ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆ ಮುಗಿದು ವರದಿ ಬಂದ ನಂತರ ಮಾತನಾಡಬಹುದು. ಅಲ್ಲಿಯವರೆಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



