Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

₹449 ಕೋಟಿ ಆದಾಯದ ಐತಿಹಾಸಿಕ ಮೈಲಿಗಲ್ಲು; ಮೈಸೂರು ರೈಲ್ವೆ ವಿಭಾಗದ ಭರ್ಜರಿ ದಾಖಲ

ಮಕ್ಕಳಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ; ಎಂ. ನಾಸಿರುದ್ದೀನ್

ಜಿಲ್ಲಾಧಿಕಾರಿ ಬಂಧನಕ್ಕೆ ವಾರಂಟ್ ; ಜಮೀನು ವ್ಯಾಜ್ಯ ಪ್ರಕರಣ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಮಕ್ಕಳಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ; ಎಂ. ನಾಸಿರುದ್ದೀನ್
ಚಿತ್ರದುರ್ಗ

ಮಕ್ಕಳಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ; ಎಂ. ನಾಸಿರುದ್ದೀನ್

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 4, 2026Updated:April 4, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಮಕ್ಕಳಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ; ಎಂ. ನಾಸಿರುದ್ದೀನ್

ಚಿತ್ರದುರ್ಗ: ಮಕ್ಕಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಸಂವಹನಾ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ಡಯಟ್‌ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದ್ವಿಭಾಷಾ ತರಗತಿ ಬೋಧನೆ ಕುರಿತು ಆಯೋಜಿಸಿದ್ದ ಜಿಲ್ಲಾ ಹಂತದ ಎಂ.ಆರ್.ಪಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೆ.ಪಿ.ಎಸ್, ಪಿ.ಎಂ.ಶ್ರೀ ಮತ್ತು ದ್ವಿಭಾಷಾ ತರಗತಿ ಪ್ರಾರಂಭಿಸಿರುವ ಸರ್ಕಾರಿ ಶಾಲೆಗಳು, ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಿಸಿರುವ ಸರ್ಕಾರಿ ಶಾಲೆಗಳು, ಗಣಿಬಾಧಿತ ತಾಲೂಕುಗಳಾದ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಗೆ ಬೋಧಿಸುವ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಕಲಿತ ಅಂಶಗಳನ್ನು ತರಗತಿಯಲ್ಲಿ ಅನುಷ್ಟಾನ ಮಾಡುವ ಮೂಲಕ ಮಕ್ಕಳಲ್ಲಿ ಭಾಷಾ ಕೌಶಲಗಳಲ್ಲಿ ಸಾಮರ್ಥ್ಯ ಬೆಳೆಸಬೇಕು ಎಂದರು.

ಉಪ ಪ್ರಾಚಾರ್ಯ ಎಸ್.ನಾಗಭೂಷಣ್ ಮಾತನಾಡಿ ಜಿಲ್ಲಾ ಹಂತದಲ್ಲಿ ತರಬೇತಿ ಪಡೆಯುತ್ತಿರುವ ಎಂ.ಆರ್.ಪಿಗಳು 5 ದಿನಗಳ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪರಸ್ಪರ ಚರ್ಚಿಸುವುದರ ಮೂಲಕ ವಿಷಯಜ್ಞಾನ ಪಡೆದು ತಾಲೂಕು ಹಂತದಲ್ಲಿ ಶಿಕ್ಷಕರಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಬೇಕು ಎಂದರು.

ಹಿರಿಯ ಉಪನ್ಯಾಸಕ ಎಸ್.ಸಿ.ಪ್ರಸಾದ್ ಮಾತನಾಡಿ, ಪ್ರಸ್ತುತ ದಿನದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಭಾಷೆ ಕಲಿಯುವುದು ಅನುಕೂಲವಾಗಿದೆ. ಪೋ಼ಷಕರು ಶೈಕ್ಷಣಿಕ ಚಟುವಟಿಕೆಗಳ ಭಾಗೀದಾರರಾಗಿದ್ದು ಮಕ್ಕಳ ಶಿಕ್ಷಣದ ಬಗ್ಗೆ ಅಪಾರ ನಿರೀಕ್ಷೆ ಹೊಂದಿರುತ್ತಾರೆ. ಶಿಕ್ಷಕರು ಅವರ ನಿರೀಕ್ಷೆಗೆ ಅನುಗುಣವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ನೋಡಲ್ ಅಧಿಕಾರಿ ಅರ್ಜುಮಂದ್ ಬಾನು, ಉಪನ್ಯಾಸಕರಾದ ಎಸ್.ಬಸವರಾಜು, ರಾಮಣ್ಣ, ಶಿವಲೀಲ, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜಿ ನಾಗರಾಜು, ಸಿ.ಬಿ ಮಂಜುನಾಥ್, ಸಿ.ಎಂ.ಸುಂದರ್‌ರಾಜ್, ರೀಟಾಮಣಿ, ಜ್ಯೋತ್ಸ್ನಾ, ವಿ.ರಾಧ, ಕೆ.ಜಿ ರಂಜಿತಾ, ಪ್ರಕಾಶ್, ಆರೀಫ ಬಾನು, ವಿನಯ್ ಮತ್ತು ಶಿಬಿರಾರ್ಥಿಗಳು ಇದ್ದರು.

ಕೌಶಲ ಮಕ್ಕಳಿಗೆ ಸಾಮರ್ಥ್ಯ
Follow on Facebook Follow on Instagram
Share. Facebook Twitter WhatsApp Telegram
Previous Articleಜಿಲ್ಲಾಧಿಕಾರಿ ಬಂಧನಕ್ಕೆ ವಾರಂಟ್ ; ಜಮೀನು ವ್ಯಾಜ್ಯ ಪ್ರಕರಣ
Next Article ₹449 ಕೋಟಿ ಆದಾಯದ ಐತಿಹಾಸಿಕ ಮೈಲಿಗಲ್ಲು; ಮೈಸೂರು ರೈಲ್ವೆ ವಿಭಾಗದ ಭರ್ಜರಿ ದಾಖಲ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

April 3, 2026

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

April 3, 2026

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

April 3, 2026
Add A Comment
Leave A Reply Cancel Reply

Advertisement
Latest Posts

₹449 ಕೋಟಿ ಆದಾಯದ ಐತಿಹಾಸಿಕ ಮೈಲಿಗಲ್ಲು; ಮೈಸೂರು ರೈಲ್ವೆ ವಿಭಾಗದ ಭರ್ಜರಿ ದಾಖಲ

ಮಕ್ಕಳಿಗೆ ಭಾಷಾ ಕೌಶಲದ ಸಾಮರ್ಥ್ಯ ಬೆಳೆಸಿ; ಎಂ. ನಾಸಿರುದ್ದೀನ್

ಜಿಲ್ಲಾಧಿಕಾರಿ ಬಂಧನಕ್ಕೆ ವಾರಂಟ್ ; ಜಮೀನು ವ್ಯಾಜ್ಯ ಪ್ರಕರಣ

ನಿತ್ಯ ಭವಿಷ್ಯ – 04/04/2026 (ಶನಿವಾರ)

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.