Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಕ್ರೀಡೆ»ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು
ಕ್ರೀಡೆ

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 29, 2026No Comments3 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು

ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಕಡೆ ಗಮನಹರಿಸಿ.

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದಾಗಿದ್ದು, ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು ಅವರು ನೌಕರರಿಗೆ ಸಲಹೆ ನೀಡಿದರು.

ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರದ ಬೆನ್ನೆಲುಬಾಗಿ ಕೆಲಸ ಮಾಡುವ ನೌಕರರ ಮಾನಸಿಕ ಉಲ್ಲಾಸಕ್ಕಾಗಿ ಕ್ರೀಡಾಕೂಟಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಪ್ರಸ್ತುತ ದಿನಗಳಲ್ಲಿ ಸರ್ಕಾರಿ ನೌಕರರು ಸತತ ಕೆಲಸದ ಒತ್ತಡದಿಂದಾಗಿ 30-40 ವರ್ಷಕ್ಕೇ ರಕ್ತದೊತ್ತಡ, ಮಧುಮೇಹದಂತಹ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ನೌಕರರು ತಮ್ಮ ಸೇವಾವಧಿಯಲ್ಲಿ ಆರೋಗ್ಯ ನಿರ್ಲಕ್ಷಿಸಿದರೆ, ನಿವೃತ್ತಿಯ ನಂತರ ಸಿಗುವ ಸೌಲಭ್ಯ ಅನುಭವಿಸಲು ದೈಹಿಕ ಶಕ್ತಿ ಇರುವುದಿಲ್ಲ. ಆದ್ದರಿಂದ ಕೆಲಸದ ಜೊತೆಗೆ ದೈಹಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿರುವ ಈ ಕ್ರೀಡಾಕೂಟವು ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮದ ಅಚ್ಚುಕಟ್ಟಾದ ಸಂಘಟನೆಗೆ ಪಿ. ರಘು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಸರ್ಕಾರಿ ನೌಕರರು ಸರ್ಕಾರದ ವಿವಿಧ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜೊತೆಗೆ, ಪಾರದರ್ಶಕ ಆಡಳಿತ ನೀಡುವ ಮೂಲಕ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು ಎಂದು ತಿಳಿಸಿದರು.

ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ನೆಲೆಸಲು ಸಾಧ್ಯವಿರುವುದರಿಂದ, ಕೆಲಸದ ಒತ್ತಡದ ನಡುವೆ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ. ಸರ್ಕಾರ ಜಾರಿಗೆ ತಂದಿರುವ “ಆರೋಗ್ಯ ಸಂಜೀವಿನಿ” ಯೋಜನೆಯು ನೌಕರರ ಮತ್ತು ಅವರ ಕುಟುಂಬದ ರಕ್ಷಣೆಗೆ ಪೂರಕವಾಗಿದೆ. ಹಾಗೆಯೇ ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಮೂಲಕ ನೌಕರರ ಆರ್ಥಿಕ ಭದ್ರತೆಗೆ ಒತ್ತು ನೀಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಾವು ಕೂಡ ಪ್ರಾಥಮಿಕ ಶಾಲಾ ಶಿಕ್ಷಕರಾಗಿ 22 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುವುದನ್ನು ನೆನಪಿಸಿಕೊಂಡ ಶಿವಣ್ಣನವರು, ನೌಕರರ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ತಮಗೆ ನಿಕಟ ಅರಿವಿದೆ. ಸರ್ಕಾರ ನೀಡುವ ಸೌಲಭ್ಯಗಳನ್ನು ಪಡೆಯುವ ನೌಕರರು, ಸಾರ್ವಜನಿಕರಿಗೆ ಸೇವೆ ನೀಡುವಾಗ ಅಷ್ಟೇ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಹೊಂದಿರಬೇಕು. ಸಾರ್ವಜನಿಕ ವಲಯದಲ್ಲಿ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಜವಾಬ್ದಾರಿ ನೌಕರರ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಸರ್ಕಾರಿ ನೌಕರರು ಕೇವಲ ಕಚೇರಿ ಕೆಲಸಕ್ಕಷ್ಟೇ ಸೀಮಿತವಾಗದೆ, ತಮ್ಮ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆ ಹಾಗೂ ಯೋಗದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.

ಜಿಲ್ಲೆಯ ಒಟ್ಟು 15 ಸಾವಿರ ಸರ್ಕಾರಿ ನೌಕರರಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿರುವುದು ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಕ್ಕೆ ನೋಂದಣಿಯಾಗಲಿ ಎಂದು ತಿಳಿಸಿದ ಅವರು, ನೌಕರರು ಬಿಡುವಿಲ್ಲದ ಕೆಲಸದ ನಡುವೆಯೂ ಪ್ರತಿದಿನ ನಡಿಗೆ, ಯೋಗ ಮತ್ತು ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಕೆಲಸದ ಒತ್ತಡ ಕಡಿಮೆಯಾಗಿ, ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಜಮೀನು ನಿಗದಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದು, ಇದು ನೌಕರರ ಕುಟುಂಬದ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿಯೂ ನೌಕರರ ಸಂಘ ಅತ್ಯುತ್ತಮ ಕಾರ್ಯಗಳನ್ನು ಮಾಡುವ ಜತೆಗೆ ತಾವುಗಳ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತಮ ಹೆಸರು ತನ್ನಿ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಸರ್ಕಾರ ಬಂದರೂ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನೌಕರರದ್ದಾಗಿರುತ್ತದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಮೂಲಕ ಸರ್ಕಾರದ ಗೌರವ ಹೆಚ್ಚಿಸುವ ಕೆಲಸ ನೌಕರರಿಂದ ಆಗಲಿ ಎಂದು ತಿಳಿಸಿದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ವಿವಿಧ ಭಾಗಗಳಲ್ಲಿ ಸುಮಾರು 8 ರಿಂದ 10 ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲಿರುವ ವಾಕಿಂಗ್ ಪಾತ್ ಮತ್ತು ಓಪನ್ ಜಿಮ್‍ಗಳನ್ನು ನೌಕರರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರಿಡಾಕೂಟ ಸಮಾರಂಭದ ಉದ್ಘಾಟನೆ ನೆರವೇರಿಸಿ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯರ್ಶಿ ಡಾ.ರಂಗಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಯ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಸರ್ಕಾರಿ ನೌಕರರು ಇದ್ದರು

chitradurga Games karanataka ಕ್ರೀಡೆ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮಿಗಳ ಸಾನಿಧ್ಯ ದಲ್ಲಿ ವಾಚನ ವ್ಯಾಖ್ಯಾನ; ಕಿರಾತುರ್ಜನೀಯ
Next Article ಗ್ರಾಮಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ – ಪ್ರಿಯಾಂಕ ಖರ್ಗೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.