ಚಿತ್ರದುರ್ಗ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಿಲ್ಲದೆ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಮುಷ್ಕರದ ಬಿಸಿ ಕೋಟೆ ನಾಡು ಚಿತ್ರದುರ್ಗಕ್ಕೂ ತಟ್ಟಿದೆ. ಬೆಳಗ್ಗೆಯಿಂದಲೇ ಸಂಪೂರ್ಣ ಸರ್ಕಾರಿ ಬಸ್ಗಳು ಸಂಚಾರ ಸ್ಥಗಿತಗೊಳಿಸಿದ ಹಿನ್ನಲೆಬಸ್ ವ್ಯವಸ್ಥೆ ಇಲ್ಲದೆ ಪ್ರಯಾಣಿಕರ ಪರದಾಟ ನಡೆಸುವಂತಾಗಿದೆ.
ಚಿತ್ರದುರ್ಗದಿಂದ ನಾನಾ ಭಾಗಗಳಿಗೆ ತೆರಳಲು ಪ್ರಯಾಣಿಕರ ಪರದಾಟ ನಡೆಸುತ್ತಿದ್ದಾರೆ. ಸರ್ಕಾರಿ ಬಸ್ ಇಲ್ಲದೆ ಖಾಸಗಿ ವಾಹನಗಳಿಗೆ ಪ್ರಯಾಣಿಕರು ಮೊರೆ ಹೋಗಿದ್ದು, ಖಾಸಗಿ ಬಸ್ ಗಳು ಸಹ ಸಂಪೂರ್ಣವಾಗಿ ಪ್ರಯಾಣಿಕರಿಂದ ರಶ್ ಆಗಿವೆ. ಇನ್ನು ಬೆಂಗಳೂರಿಗೆ ಹೊರಟ ಪ್ರಯಾಣಿಕರಿಗೆ ಬಸ್ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಒಂದು ಬಸ್ ಸಹ ಬೆಂಗಳೂರಿಗೆ ಹೋಗದಿರುವುದಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲಿಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



