ಚಿತ್ರದುರ್ಗ: ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ 26ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ತಿಳಿಸಿದೆ.
ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷ ಅಭಿಷೇಕ ಮತ್ತು ಅಲಂಕಾರ ಮಾಡಲಾಗುವುದು. ಬೆಳಿಗ್ಗೆ 10.30ಕ್ಕೆ ಲಕ್ಷ್ಮಿ ನಾರಾಯಣ ಹೃದಯಾ ಹೋಮ 12.30 ಗಂಟೆಗೆ ಪೂರ್ಣವತಿ ನೆರವೇರಿಸಲಾಗುವುದು. ಇನ್ನು ಪೂರ್ಣಾವತಿಗೆ ಭಕ್ತಾದಿಗಳು ಸೀರೆ,ಕುಪ್ಪಸ, ಹಣ್ಣುಗಳು, ದವಸ ಧಾನ್ಯಗಳು ತುಪ್ಪ ಹಾಗೂ ಇನ್ನಿತರೆ ಪೂಜಾ ಸಾಮಗ್ರಿಗಳನ್ನು ನೀಡಬಹುದಾಗಿದ್ದು, ಜೊತೆಗೆ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮವು ನೆರವೇರಲಿ ಎಂದು ದೇವಸ್ಥಾನ ಸೇವಾ ಟ್ರಸ್ಟ್ ತಿಳಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶರಣ್ ಕುಮಾರ ವಹಿಸಲಿದ್ದು, ಇದೆ ವೇಳೆ ಕಾರ್ಯದರ್ಶಿಎಂ.ಪಿ.ವೆಂಕಟೇಶ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್, ನಿರ್ದೇಶಕರು ಹಾಗೂ ಮಲ್ಲಿಕಾರ್ಜುನ ಸ್ವಾಮಿ,
ಹನುಮಂತರೆಡ್ಡಿ ಭಾಗಿಯಾಗುವರು.ಈ ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಸಮಸ್ತ ಭಕ್ತಾದಿಗಳು ಆಗಮಿಸಿ ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಮನವಿ ಮಾಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



