* ಬಾರಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ*
ಚಿತ್ರದುರ್ಗ: ದುರ್ಗೋತ್ಸವ ಆಚರಿಸದೆ ಐತಿಹಾಸಿಕ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
ರಾಜಮಹಾರಾಜರು, ವೀರವನಿತೆ ಒನಕೆ ಓಬವ್ವ ಆಳಿದಂತ ಚಿತ್ರದುರ್ಗದ ಏಳುಸುತ್ತಿನ ಕೋಟೆಯಲ್ಲಿ ಇಲ್ಲಿಯವರೆಗೂ ಮೂರು ಬಾರಿ ಮಾತ್ರ ದುರ್ಗೋತ್ಸವ ಆಚರಿಸಲಾಗಿದೆ. ಅನೇಕ ಸಾರಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರೂ ಸ್ಪಂದಿಸುತ್ತಿಲ್ಲ. ದೇಶ-ವಿದೇಶಗಳಿಂದ ಪ್ರವಾಸಿಗರು ಚಿತ್ರದುರ್ಗಕ್ಕೆ ಆಗಮಿಸಿ ಕೋಟೆ ವೀಕ್ಷಿಸುತ್ತಾರೆ. ಜೋಗಿಮಟ್ಟಿ, ಚಂದ್ರವಳ್ಳಿ, ಆಡುಮಲ್ಲೇಶ್ವರ, ದವಳಪ್ಪನಗುಡ್ಡ, ಮುರುಘಾಮಠ ಹೀಗೆ ಜಿಲ್ಲೆ ಅನೇಕ ಪ್ರವಾಸಿ ಸ್ಥಳಗಳಿಗೆ ಹೆಸರುವಾಸಿಯಾಗಿದೆ. ಹಂಪಿ ಉತ್ಸವದಂತೆ ಪ್ರತಿ ವರ್ಷವೂ ದುರ್ಗೋತ್ಸವ ಆಚರಿಸಿದರೆ ಚಿತ್ರದುರ್ಗದ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸಿದಂತಾಗುತ್ತದೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ದುರ್ಗೋತ್ಸವ ಆಚರಿಸುವಂತೆ ಐದಾರು ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ ಅಂತ್ಯದೊಳಗೆ ಆಚರಿಸುವುದಾಗಿ ಭರವಸೆ ನೀಡಿದ್ದಾರೆ. ಹುಸಿಯಾಗಬಾರದು. ದುರ್ಗೋತ್ಸವ ಆಚರಿಸಿ ರಾಜಾವೀರಮದಕರಿನಾಯಕರಿಗೆ ಹಾಗು ಒನಕೆ ಓಬವ್ವಳಿಗೆ ಗೌರವ ಸಲ್ಲಿಸಬೇಕೆಂಬುದು ನಮ್ಮ ಆಸೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.
________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



