ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀವಿರುದ್ದದ ಪೋಕ್ಸೋ ಪ್ರಕರಣ ಸಂಬಂಧ ಇಂದು 313 ಹೇಳಿಕೆ ನೀಡಲು ಕೋರ್ಟ್ ಗೆ ಮುರುಘಾ ಶರಣರು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದ ಬಗ್ಗೆ ಪೋಲಿಸರು 1ನೇ ಪೋಕ್ಸೊ ಪ್ರಕರಣದ A ಮತ್ತು B ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದರು.ಇಂದು A ಚಾರ್ಜ್ ಶೀಟಲ್ಲಿನ ಸಾಕ್ಷಿಗಳ ಹೇಳಿಕೆ ಕುರಿತು 313 ಹೇಳಿಕೆ ದಾಖಲಿಸಿಕೊಂಡಿದ್ದಾರೆ.ಇನ್ನು ನ್ಯಾಯಾದೀಶರಾದ ಗಂಗಾಧರಪ್ಪ ಚನ್ನಬಸಪ್ಪ ಹಡಪದ ಚಾರ್ಜ್ ಶೀಟ್ Bನ 313 ಹೇಳಿಕೆಯನ್ನ ಜುಲೈ 10ಕ್ಕೆ ನಿಗಧಿ ಮಾಡಿದ ಬಳಿಕ ಮುರುಘಾ ಶ್ರೀಗಳಿಗೆ ಜಿಲ್ಲೆಯಲ್ಲಿ ಎಲ್ಲೂ ನಿಂತು ಜನರನ್ನ ಮಾತಾಡಿಸದಂತೆ ಮುರುಘಾ ಶ್ರೀಗೆ ಸೂಚನೆ ನೀಡಿದರು. ಬಳಿಕ ನ್ಯಾಯಾಧೀಶರ ಸೂಚನೆಯಂತೆ ನೇರವಾಗಿ ಮುರುಘಾ ಶ್ರೀಗಳು ಕಾರು ಹತ್ತಿಕೊಂಡು ದಾವಣಗೆರೆಯತ್ತಾ ಪ್ರಯಾಣ ಬೆಳೆಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



