ಚಿತ್ರದುರ್ಗ: ನಗರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಲ ಯುವಕರು ವಿಲ್ಹಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಯುವಕರು ವೀಲ್ಹಿಂಗ್ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕರ ಪುಂಡಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಜೊತೆಗೆ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಕೆಲ ಯುವಕರು ಎರಡ್ಮೂರು ಬೈಕ್ ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಗಳಲ್ಲಿ ವೀಲಿಂಗ್ ಮಾಡಿದ್ದಾರೆ. ಬೈಕ್ ಗಳಿಗೆ ರಾಷ್ಟ್ರೀಯ ಧ್ವಜ ಅಳವಡಿಸಿರುವ ಕಾರಣ ಯುವಕರು ಸ್ವಾತಂತ್ರ್ಯ ದಿನಾಚರಣೆ ದಿನ ವೀಲಿಂಗ್ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಸಾರ್ವಜನಿಕರ ಎದುರು ಹಾಗೂ ಹೆದ್ದಾರಿಯಲ್ಲಿ ಹೆಚ್ಚು ವೇಗವಾಗಿ ಓಡಾಟ ನಡೆಸುವ ಜಾಗದಲ್ಲಿ ಪುಂಡಾಟ ಮೆರೆದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಗಳನ್ನು ಈಗಾಗಲೇ ಕಲೆ ಹಾಕಲಾಗಿದ್ದು, ಯುವಕರನ್ನು ಪತ್ತೆ ಮಾಡಲಾಗುತ್ತಿದೆ. ಒಂದೆರೆಡು ದಿನಗಳಲ್ಲಿ ಅವ್ರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







