ಚಿತ್ರದುರ್ಗ, ಮೇ.20: ಸೋಮವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 3.4 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 0.1 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 1.1 ಹಿರಿಯೂರು ತಾಲ್ಲೂಕು 2.8 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 2.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 6.3 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 0.9 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 0.1 ಮಿ.ಮೀ, ಪರಶುರಾಂಪುರ 0.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 0.7 ಮಿ.ಮೀ, ಭರಮಸಾಗರ 2.5 ಮಿ.ಮೀ, ಹಿರೇಗುಂಟನೂರು 1.6 ಮಿ.ಮೀ, ತುರುವನೂರು 0.1 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 0.8 ಮಿ.ಮೀ, ಧರ್ಮಪುರ 0.1 ಮಿ.ಮೀ, ಜವನಗೊಂಡನಹಳ್ಳಿ 10 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.3 ಮಿ.ಮೀ, ಬಿ.ದುರ್ಗ 0.4 ಮಿ.ಮೀ, ರಾಮಗಿರಿ 1.7 ಮಿ.ಮೀ, ತಾಳ್ಯ 3.3 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 3.8 ಮಿ.ಮೀ, ಮಾಡದಕೆರೆ 4.5 ಮಿ.ಮೀ, ಮತ್ತೋಡು 10.3ಮಿ.ಮೀ, ಶ್ರೀರಾಂಪುರ 8.5 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ದೇವಸಮುದ್ರದಲ್ಲಿ 1.9 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



