ಚಿತ್ರದುರ್ಗ: ನಗರದ ಆನೆಬಾಗಿಲು ಸಮೀಪ ಸೆ.22 ರಿಂದ ಅ.2 ರವರೆಗೆ ಐದನೇ ವರ್ಷದ ದುರ್ಗಾದೇವಿ ಪ್ರತಿಷ್ಟಾಪಿಸಿ ದುರ್ಗೋತ್ಸವ ಆಚರಿಸಲಾಗುವುದೆಂದು ಹಿಂದೂ ಘರ್ಜನೆ ಸೇನಾ ಸಂಸ್ಥಾನ ಅಧ್ಯಕ್ಷ ಸಾಗರ್ ತಿಳಿಸಿದರು.ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 12 ದಿನಗಳ ಕಾಲ ದುರ್ಗಾ ದೇವಿಗೆ ವಿಶೇಷವಾದ ಪೂಜೆ ಸಲ್ಲಿಸಿ ಪ್ರತಿನಿತ್ಯವೂ ಒಂದೊಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹೋಮ, ಹವನವಿರುತ್ತದೆ. ಅ.2ರಂದು ಮೆರವಣಿಗೆ ಮೂಲಕ ದುರ್ಗಾದೇವಿಯನ್ನು ಚಂದ್ರವಳ್ಳಿಯಲ್ಲಿ ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದುರ್ಗಾದೇವಿಯ ದರ್ಶನ ಪಡೆಯುವಂತೆ ಸಾಗರ್ ಕೋರಿದ್ದಾರೆ.ಮಂಜುನಾಥ್, ಪಾಂಡುರಂಗಪ್ಪ, ಪೇಜ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







