ಚಿತ್ರದುರ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ ಚಿತ್ರದುರ್ಗ, ಕಲಾಚೇತನ್ಯ ಸೇವಾ ಸಂಸ್ಥೆ ಮತ್ತು ಪಾಶ್ರ್ವನಾಥವಿದ್ಯಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗರದ ಪಾಶ್ರ್ವನಾಥ ಶಾಲೆಯ ಪ್ರೌಢ ಶಾಲಾ ಮಕ್ಕಳಿಗೆ ಪರಿಸರಸ್ನೇಹಿ ಗೌರಿಗಣೇಶ ಹಬ್ಬದ ಕುರಿತು ಜಾಗೃತಿ ಕಾರ್ಯಕ್ರಮ ಮಾಡಲಾಯಿತು.ಶಾಲಾ ಆವರಣದಲ್ಲಿ ಮಣ್ಣಿನಿಂದ ಗಣಪತಿ ಮೂರ್ತಿಗಳನ್ನುಮಾಡುವ ಪ್ರಾತ್ಯಕ್ಷಿಕೆ ತೋರಿಸುವುದರೊಂದಿಗೆ ಮಕ್ಕಳಿಗೆ ಗಣೇಶ ಮೂರ್ತಿಗಳನ್ನು ಮಾಡಿಸಿ ಅರಿವು ಮೂಡಿಸಲಾಯಿತು.ಈ ಸಂದರ್ಭದಲ್ಲಿ ಉಪ ಪರಿಸರ ಅಧಿಕಾರಿ ರಾಜೇಶ್ ಮಾತನಾಡಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲ ಮೂಲಗಳುಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತುರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತ ಗೊಂಡಂತಹ ಮೂರ್ತಿಗಳನ್ನು ರಾಜ್ಯಾದ್ಯಂತ ಯಾವುದೇ ಜಲಮೂಲಗಳಲ್ಲಿವಿಸರ್ಜಿಸುವುದನ್ನು ಸಂಪೂರ್ಣ ವಾಗಿ ನಿಷೇಧಿಸಲಾಗಿದ್ದು ಎಲ್ಲರೂ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲಸಂಪನ್ಮೂಲ ಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದರು.ನಗರಸಭೆಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ನಿರ್ಮಲಾ ಮಣ್ಣಿನಿಂದ ಮಾಡಿದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ,ಪೂಜಿಸಿದ ನಂತರ ನಗರಸಭೆವತಿಯಿಂದ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ವ್ಯವಸ್ಥೆ ಮಾಡಲಾಗಿದ್ದು ಇದರ ಸದ್ಬಳಕೆಮಾಡಿಕೊಂಡು ಮೂರ್ತಿ ವಿಸರ್ಜಿಸುವಂತೆ ತಿಳಿಸಿ ಮನೆಯಲ್ಲಿ ಬಕೆಟುಗಳಲ್ಲಿ ವಿಸರ್ಜನೆ ಮಾಡಿ ಅದನ್ನು ಮರಗಳಿಗೆ ಹಾಕಬೇಕುಎಂದರು.ಕಲಾಚೇತನ್ಯ ಸೇವಾ ಸಂಸ್ಥೆಯ ನಾಗರಾಜ್ ಬೇದ್ರೆ ಗಣಪತಿಗಳನ್ನು ತಯಾರು ಮಾಡಿದ ಪ್ರಾತ್ಯಕ್ಷತೆಯನ್ನು ತೋರಿಸಿದರು.150 ಮಕ್ಕಳು ಇದರಲ್ಲಿ ಭಾಗವಹಿಸಿ ಗಣಪತಿಯನ್ನು ತಯಾರು ಮಾಡಿದರು.
ಈ ಸಮಯದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕರಾದ ಜಯಪ್ರಕಾಶ್, ಪಾಶ್ರ್ವನಾಥ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯಸುರೇಶ್ ಕುಮಾರ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ನಾಜೀಮ್, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜನಕ ರೆಡ್ಡಿನಗರಸಭೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸಿಬ್ಬಂದಿ ವರ್ಗ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







