ಚಿತ್ರದುರ್ಗ: ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಚಿತ್ರದುರ್ಗ ಜಿಲ್ಲಾ ಸಮಿತಿ ವತಿಯಿಂದ ಚಿತ್ರದುರ್ಗ ಪ್ರವಾಸಿ
ಮಂದಿರದಲ್ಲಿ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯನ್ನು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ
ರಾಮಚಂದ್ರರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಇದರಲ್ಲಿ ಚಿತ್ರದುರ್ಗ ಜಿಲ್ಲಾ ಸಮಿತಿಗೆ ರಾಜ್ಯ ಹಿರಿಯ ಸಲಹಾಗಾರರನ್ನಾಗಿ ತಿಪ್ಪೇಸ್ವಾಮಿ ಪಿ.ಎಂ.
ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷರನ್ನಾಗಿ ಸಾಧಿಕ್ (ಸೀಮೆಎಣ್ಣೆ) ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ದಾದಾಪೀರ್ ಎಸ್. ಕಾರ್ಮಿಕ
ಘಟಕ ಜಿಲ್ಲಾಧ್ಯಕ್ಷರನ್ನಾಗಿ ಶರಣಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ನಾಗರಾಜ್ ಕೆ, ಚಿತ್ರದುರ್ಗ ಜಿಲ್ಲೆ ಯುವ ಘಟಕ
ಗೌರವಾಧ್ಯಕ್ಷರನ್ನಾಗಿ ಗೌತಮ್ ಎಚ್ ಉಪಾಧ್ಯಕ್ಷರನ್ನಾಗಿ ನಿತಿನ್. ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಕಾರ್ಯದರ್ಶಿಯನ್ನಾಗಿ
ಮಾರುತಿ ಕಾರ್ಯದರ್ಶಿಯನ್ನಾಗಿ ಗಂಗೂಲಿ, ವೆಂಕಟೇಶ್.ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ರಾಮಚಂದ್ರ.ಕೆ,ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್, ರಾಜ್ಯ
ಕಾರ್ಯದರ್ಶಿ ಮಾರುತಿ ಎನ್, ರಾಜ್ಯ ಕಾರ್ಯದರ್ಶಿ ರೇವಣ್ಣಸಿದ್ದಪ್ಪ. ಬಿ. ಕಲ್ಕುಂಟೆ ರಾಜ್ಯ ಕಾನೂನು ಸಲಹೆಗಾರರಾದ ಗೋಣೆಪ್ಪ
ಸಂಗೊಳ್ಳಿ, ಬೆಂಗಳೂರು ವಿಭಾಗ ಅಧ್ಯಕ್ಷರಾದ ನರಸಿಂಹಸ್ವಾಮಿ, ಜಿಲ್ಲಾಧ್ಯಕ್ಷರಾದ ಆರ್ ಶಿವರಾಜ್ ಕುಮಾರ್, ಜಿಲ್ಲಾ
ಉಪಾಧ್ಯಕ್ಷರಾದ ಲಕ್ಷ್ಮಣರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಯುವ ಘಟಕ ಜಿಲ್ಲಾಧ್ಯಕ್ಷ ಮಳ್ಳಪ್ಪ, ಎಸ್ . ಟಿ.ಘಟಕ
ಜಿಲ್ಲಾಧ್ಯಕ್ಷ ಓ ರಾಮಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ತಿಪ್ಪೇಸ್ವಾಮಿ, ಹಿರಿಯೂರು ತಾಲೂಕು ಅಧ್ಯಕ್ಷರಾದ ಓಂಕಾರ್ ಮೂರ್ತಿ,
ಜಿಲ್ಲಾ ಅಲ್ಪಸಂಖ್ಯಾತರ ಘಟಕ ಜಿಲ್ಲಾ ಕಾರ್ಯದರ್ಶಿ ಮೆಹಬೂಬ್ ಬಾಷ್, ಇನ್ನು ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







