ಚಿತ್ರದುರ್ಗ: ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಖಾತೆಗೆ ನೇರವಾಗಿ ಹಾಕಿದೆ. ಇಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಕೆಪಿಸಿಸಿ ಪ್ರಚಾರಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.ನಗರದ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ವಿರೋಧ ಪಕ್ಷಗಳು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದುಅಪಪ್ರಚಾರ ಮಾಡಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಶೇ.5ರಷ್ಟು ಕೆಲಸ ಮಾಡಿ ಶೇ.95ರಷ್ಟು ಪ್ರಚಾರ ಪಡೆದುಕೊಳ್ಳುತ್ತವೆ. ಆದರೆ,ಕಾಂಗ್ರೆಸ್ ಶೇ.95ರಷ್ಟು ಕೆಲಸ ಮಾಡಿದರೂ ಶೇ.5ರಷ್ಟು ಮಾತ್ರ ಪ್ರಚಾರ ಪಡೆಯುತ್ತದೆ. ಹಾಗಾಗಿ, ಚುನಾವಣಾ ಸಮಯದಲ್ಲಿಮಾತ್ರವೇ ಪ್ರಚಾರ ಸಮಿತಿ ಕಾರ್ಯನಿರ್ವಹಿಸದೆ ವರ್ಷದ ಎಲ್ಲಾ ದಿನಗಳೂ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ ಹಣದಿಂದ ಅವರ ಖರೀದಿ ಸಾಮಗ್ರಿಗಳು ಹೆಚ್ಚಾಗಿದೆ. ಕೇವಲ ರಸ್ತೆ ಮಾಡುವುದು, ಕಟ್ಟಡ ಕಟ್ಟುವುದು ಮಾತ್ರವೇ ಅಭಿವೃದ್ಧಿ ಅಲ್ಲ. ಜನರಿಗೆ ಆರ್ಥಿಕ ಶಕ್ತಿ ತುಂಬುವುದೂ ಸಹ ಒಂದು ಬಗೆಯ ಅಭಿವೃದ್ಧಿ ಎಂಬುದನ್ನು ಪ್ರತಿ ಮತದಾರರಿಗೂ ತಿಳಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.ಸಂವಿಧಾನದ ತತ್ವವನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆಯಿಟ್ಟು ಕಾರ್ಯನಿರ್ವಹಿಸುತ್ತಿದೆ. ಹಿಂದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ರಚನೆಯಾಗುತ್ತಿದ್ದ ಪ್ರಚಾರ ಸಮಿತಿಯನ್ನು ಎಐಸಿಸಿಯು ಪಕ್ಷದ ಸಂಘಟನೆ, ಬಲವರ್ಧನೆಗಾಗಿ ಶಾಶ್ವತವಾಗಿ ರಚನೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ ಎಂದರು. ಈ ಪ್ರಚಾರ ಸಮಿತಿಯನ್ನು ಪ್ರತಿ ಬೂತ್
ಮಟ್ಟದಿಂದಲೂ ಇಬ್ಬರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಏಳಿಗೆಗಾಗಿ ಶ್ರಮಿಸಲಾಗುವುದು. ಈ ಸಮಿತಿ ವತಿಯಿಂದ ಸರ್ಕಾರದ
ಅಭಿವೃದ್ಧಿ ಕಾರ್ಯಕ್ರಮಗಳನ್ನು ಗ್ರಾಮೀಣ ಮಟ್ಟದಿಂದಲೂ ಪ್ರತಿಯೊಬ್ಬರು ಪ್ರಚಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ.ಅಲ್ಲದೇ ಪಕ್ಷವನ್ನು ಸಿದ್ಧಾಂತದೊಂದಿಗೆ ಕಟ್ಟಲಾಗುತ್ತದೆ ಎಂದು ಹೇಳಿದರು.ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರಿ ಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಬೇಕೆಂದುಪ್ರಚಾರ ಸಮಿತಿ ಜೊತೆಗೆ ಪಕ್ಷದ ಪದಾಧಿಕಾರಿಗಳು ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜನರಿಗೆ ಮನವರಿಕೆಮಾಡಿಕೊಡಬೇಕಾಗಿದೆ. ಚುನಾವಣಾ ಸಮಯದಲ್ಲಿ ಮಾತ್ರವೇ ಪ್ರಚಾರ ಸಮಿತಿ ಕಾರ್ಯ ನಿರ್ವಹಿಸದೇ ವರ್ಷದ ಎಲ್ಲಾ ದಿನಗಳಲ್ಲೂ
ಕಾರ್ಯ ನಿರ್ವಹಿಸಬೇಕಿದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆಯುತ್ತಿದೆ. ಆದರೆ ಪ್ರತಿ ಪಕ್ಷದ ಮೂಲಕ ನಾಯಕರು ರಾಜ್ಯ ಸರ್ಕಾರ ದಿವಾಳಿಯಾಗಿದೆ.ಅಭಿವೃದ್ಧಿ ಕುಂಠಿತವಾಗಿದೆ ಎಂದು ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವುದು ಅವರ ಹೀನಾಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಕೆಲವು ರಸ್ತೆ, ಅಭಿವೃದ್ಧಿಯಲ್ಲ, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವುದು ಸಹ ಅಭಿವೃದ್ಧಿ, ಪಂಚ ಗ್ಯಾರಂಟಿ, ಮಾಸಾಶನ ಸೇರಿದಂತೆ ವಿವಿಧ ಯೋಜನೆಗಳ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಖಾತೆಗೆ ನೇರವಾಗಿ ಪಾವತಿಸಿದೆ. ಇದರ ಪರಿಣಾಮ ಅಷ್ಟು ಮೊತ್ತ ಮಾರುಕಟ್ಟೆಯಲ್ಲಿ ಚಲಾವಣೆಯಾಗಿಜನರು ಖರೀದಿಸುವ ಸಾಮರ್ಥ್ಯ ಕೂಡ ಹೆಚ್ಚಾಗಿದೆ ಎಂದರು. ರಾಜ್ಯದ ಜಿಡಿಪಿ ಸಹ 10.2ಕ್ಕೆ ಏರಿಕೆಯಾಗಿದೆ. ಪ್ರತಿ ಕುಟುಂಬದ ತಲಾ
ಆದಾಯ ಒಂದು ಲಕ್ಷದ ನಾಲ್ಕು ಸಾವಿರ ರೂ. ಏರಿಕೆಯಾಗಿ ತಲಾ ಆದಾಯ ವೃದ್ಧಿಯಲ್ಲಿ . ಭಾರತ ದೇಶದಲ್ಲಿಯೇ ಮೊದಲ
ಸ್ಥಾನದಲ್ಲಿದೆ. – ಜನರ ಆದಾಯ ಹೆಚ್ಚಾಗಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರಣ ಎಂಬುದನ್ನು ಜನರಿಗೆ ಮನದಟ್ಟು
ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 59 ಸಾವಿರ ಬೂತ್ಗಳಿದ್ದು, ಈ ಪ್ರಚಾರ ಸಮಿತಿಗೆ ಪ್ರತಿ ಬೂತ್ ಮಟ್ಟದಿಂದಲೂ ಇಬ್ಬರಂತೆ ಒಂದು ಲಕ್ಷಕ್ಕೂ ಅಧಿಕ
ಜನರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಜ್ಯ ಸರ್ಕಾರದ 4 ಲಕ್ಷದ 9 ಸಾವಿರ ಕೋಟಿ ರೂ.ಬಜೆಟ್ನಲ್ಲಿ ಒಂದು ಲಕ್ಷ ಕೋಟಿ ರೂ. ಗಳನ್ನು ಜನರ ಖಾತೆಗೆ ಹಾಕುತ್ತಿದ್ದಾರೆ. 58 ಸಾವಿರ ಕೋಟಿ ರೂ. ಗ್ಯಾರಂಟಿ, 118ಸಾವಿರ ಕೋಟಿ ರೂ. ವಿದ್ಯುತ್ ಉಚಿತ ನೀಡಿಕೆ, ಸರ್ಕಾರ ದಿವಾಳಿಯಾಗಿದ್ದರೆ ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಖಾತೆಹಾಕಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸಿದ ಅವರು, ಯಾವುದೇ ಭ್ರಷ್ಟಾಚಾರವಿಲ್ಲ. ಸರ್ಕಾರಿ ನೌಕರರ ಏಳನೇ ವೇತನಕ್ಕೆ 23ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಜಲಜನಾಯ್ಕ್. ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್ ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಉಪಾಧ್ಯಕ್ಷರಾದ ಕುಮಾರಗೌಡ, ಚಿತ್ರದುರ್ಗ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ನಂದಿನಿಗೌಡ,ಓಬಿಸಿ ಅಧ್ಯಕ್ಷ ಎನ್.ಡಿ. ಕುಮಾರ್, ಜಿ.ಪಂ ಮಾಜಿ ಸದಸ್ಯ ನರಸಿಂಹಮೂರ್ತಿ, ಲೋಕೇಶ್, ಸೇವಾದಳದ ಅಧ್ಯಕ್ಷ ಭೂತೇಶ್,ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ, ವೆಂಕಟೇಶ್, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್,
ಲಕ್ಷ್ಮೀಕಾಂತ್, ಶಿವಮೂರ್ತಿ, ಮಂಜುನಾಥ್, ಖುದ್ದುಸ್, ನಜ್ಮತಾಜ್, ಡಾ,ಸಂತೋಷ ಕುಮಾರ್, ಮುಧುಗೌಡೆ, ಖಲಿಂವುಲ್ಲಾ,
ಶಿವಣ್ಣ, ಶಿವಕುಮಾರ್, ರಾಧಮ್ಮ, ರುದ್ರಾಣಿ ಗಂಗಾಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







