ಚಿತ್ರದುರ್ಗ :ಚಿತ್ರದುರ್ಗ ಸಹಕಾರಿ ಯೂನಿಯನ್ನ 62ನೇ ವಾರ್ಷಿಕ ಮಹಾ ಸಭೆ ಇತ್ತೀಚಿಗೆ ನಗರದ ದಾವಣಗೆರೆ ರಸ್ತೆಯ ಜೆ.ಎಂ.ಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಿತು. ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಸಂಘಗಳ ಲಾಭದಲ್ಲಿ ಶೇ.2% ರಷ್ಟು ಸಹಕಾರ ಶಿಕ್ಷಣ ನಿಧಿ ಪಾವತಿಸುತ್ತಿರುವ ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಚಿತ್ರದುರ್ಗ ತಾಲ್ಲೂಕಿನ ಎಸ್.ಜೆ.ಎಂ. ಪತ್ತಿನ ಸಹಕಾರ ಸಂಘ, ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ, ಕಡ್ಲೆಗುದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹಿರಿಯೂರುನ ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಸನ್ಮಾನಿಸಲಾಯಿತು.ಯೂನಿಯನ್ನಿನ ಜಿಲ್ಲಾ ಸಹಕಾರಯೂನಿಯನ್ ಉಪಾಧ್ಯಕ್ಷ ಹೆಚ್.ವಿ.ಪ್ರತಾಪ ಸಿಂಹ, ನಿರ್ದೇಶಕರುಗಳಾದ ಜಿಂಕಲು ಬಸವರಾಜ, ಮಾತೃಶ್ರೀ ಮಂಜುನಾಥ್, ಜಿ.ಈ.ಅಜ್ಜಪ್ಪ, ಜಿ.ಎನ್.ಹರೀಶ್, ಜಿ.ಬಿ.ಶೇಖರಪ್ಪ, ಎ.ಚನ್ನಬಸಪ್ಪ, ಕೆ.ಆರ್.ಜಗನ್ನಾಥ್, ಪ್ರಭಾವತಿ, ಕೆ.ಜಗ್ಗಣ್ಣ, ಯೂನಿಯನ್ನಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಶ್ರೀ ಪಿ.ಹುನಗುಂದ, ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







