ಚಿತ್ರದುರ್ಗ:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ-ನನ್ನ ಹಕ್ಕು ಎಂಬ ಮಹತ್ವ ಸಾರುವ ಉದ್ದೇಶದೊಂದಿಗೆ ಚಿತ್ರದುರ್ಗ ನಗರದಲ್ಲಿ ಸೈಕಲ್ ಹಾಗೂ ಬೈಕ್ ರ್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ದಿನದ ಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಸೈಕಲ್ ಹಾಗೂ ಬೈಕ್ ರ್ಯಾಲಿಯು ಮಹಾತ್ಮಾಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ, ಕನಕ ವೃತ್ತದ ಮೂಲಕ ಮತ್ತೆ ಪುನಃ ಜಿಲ್ಲಾಧಿಕಾರಿಗಳ ಕಚೇರಿವರೆಗೂ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಗೋವಿಂದರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







