ಚಿತ್ರದುರ್ಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹಾಗೂ ಕಾನೂನು ವಿಭಾಗದ ಅಧ್ಯಕ್ಷ ಶ್ರೀಧರ್ ಜಾದವ್ ಆದೇಶದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಪ್ರದೀಪ್ ಎಸ್. ಉಪಾಧ್ಯಕ್ಷರಾಗಿ
ಮೈಲಾರ ಎಂ.ಕೋಟಿ ಹಾಗೂ ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ಹೋಬಳಿಯ ಹೆಚ್.ರಮೇಶ್ ಇವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ
ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಮೂವರಿಗೂ ನೇಮಕಾತಿ ಪತ್ರಗಳನ್ನು ವಿತರಿಸಿ ಮುಂದೆ ನಡೆಯುವ ಎಲ್ಲಾಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಶ್ರಮಿಸುವಂತೆ ನೂತನವಾಗಿ ನೇಮಕಗೊಂಡವರಿಗೆ ಸೂಚಿಸಿದರು.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ನ್ಯಾಯವಾದಿ ಎನ್.ಶಶಾಂಕ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷಎಸ್.ಎನ್.ರವಿಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಆಲಿ,ತಿಪ್ಪೇಸ್ವಾಮಿ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







