ಚಿತ್ರದುರ್ಗ: ಚಿತ್ರದುರ್ಗ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪುನರುಚ್ಚರಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯ ಹಲವೆಡೆ ಗಣಪತಿ ವಿಸರ್ಜನೆಗಳು ಶಾಂತಿಯುತವಾಗಿ ನಡೆದಿವೆ. ಆದ್ದರಿಂದ ನಗರದಲ್ಲಿ ಪ್ರತಿಷ್ಠಾಪನೆ ಆಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಅವಕಾಶ ಕೊಡುವುದಿಲ್ಲ. ಕಳೆದ ಬಾರಿ ಡಿಜೆಯಿಂದಾಗಿ ಹಲವರು ಕಿವಿ ಕಳೆದುಕೊಂಡಿದ್ದಾರೆ. ಅದಕ್ಕೆ ಹೊಣೆ ಯಾರು, ಅದರ ಬದಲಾಗಿ ಮೂಲ ಕಲೆಗಳನ್ನು ಕಲಾವಿದರನ್ನು ಉಳಿಸುವ ಉದ್ದೇಶದಿಂದ ಕಲಾವಿದರನ್ನು ಕರೆಸಿ ಭಕ್ತಿಯಿಂದ ಹಬ್ಬ ಮಾಡೋಣ ಎಂದರು.ಇನ್ನು ಮದ್ದೂರು ಗಣೇಶ ವಿಸರ್ಜನೆ ವೇಳೆ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ಮಾತಾಡುತ್ತೇನೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







