ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ರೇಣುಕಾಪುರ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಗೊಂಡಿದ್ದು, ಹೆಂಚುಗಳು ಹೊಡೆದಿರುವುದರಿಂದ ಮಳೆ ಬಂದರೆ ನೀರು ಒಳಗೆ ನಿಲ್ಲುತ್ತದೆ.ಅದಕ್ಕಾಗಿ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ರೇಣುಕಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ತುಂಬಾ ಹಳೆಯದಾಗಿದ್ದು, 300 ರಿಂದ 400 ಮಕ್ಕಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆಕಸ್ಮಿಕವಾಗಿ ಕಟ್ಟಡ ಕುಸಿದರೆ ಮಕ್ಕಳ ಪ್ರಾಣಹಾನಿಯಾಗುವ ಸಾಧ್ಯತೆಯಿದೆ. ಮಕ್ಕಳನ್ನು ಹೊರಗೆ ಕೂರಿಸಿ ಪಾಠ ಹೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅವಘಡ ಸಂಭವಿಸುವ ಮೊದಲೆ ಎಚ್ಚೆತ್ತುಕೊಂಡು ನೂತನ ಕಟ್ಟಡ ನಿರ್ಮಾಣ ಮಾಡುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡುವಂತೆ ಕೆ.ಪಿ.ಭೂತಯ್ಯ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.ಇನ್ನು ಹದಿನೈದು ದಿನದೊಳಗೆ ಹಳೆ ಶಾಲೆಯನ್ನು ಕೆಡವಿ ಹೊಸ ಶಾಲೆ ಕಟ್ಟಬೇಕು. ಇಲ್ಲವಾದಲ್ಲಿ ಶಾಲೆಯ ಮುಂಭಾಗದಲ್ಲಿ ರಸ್ತೆ ತಡೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಬರುವತನಕ ಧರಣಿ ಸತ್ಯಾಗ್ರಹ ನಡೆಸಲಾಗುವುದೆಂದು ಕೆ.ಪಿ.ಭೂತಯ್ಯ ಎಚ್ಚರಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ, ಎಂ.ಶಶಿಕಲಾ ಇವರುಗಳು ಈ ಸಂದರ್ಭದಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







