ಚಿತ್ರದುರ್ಗ: ಪರಿಶಿಷ್ಟರ ಪಟ್ಟಿಯಲ್ಲಿರುವ ಅಲೆಮಾರಿ ಜನಾಂಗದ 59 ಜಾತಿಗಳಿಗೆ ಪ್ರತ್ಯೇಕ ಶೇ. 1 ರಷ್ಟು ಮೀಸಲಾತಿಯನ್ನು
ನೀಡುವಂತೆ ಸ್ಲಂ ಜನಾಂದೋಲನ-ಕರ್ನಾಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ
ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಆ.1, 2024 ರಂದು ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು
ಮಹತ್ವದತೀರ್ಪುನೀಡಿತು.ತದನಂತರದತ್ತಾಂಶಸಂಗ್ರಹಕ್ಕಾಗಿಮುಖ್ಯಮಂತ್ರಿಸಿದ್ದರಾಮಯ್ಯನವರುನಾಗಮೋಹನ್ದಾಸ್ಆಯೋಗ ರಚಿಸಿದರು. ಆಯೋಗವು ಅಸ್ಪೃಶ್ಯ, ಅಲೆಮಾರಿ ಜಾತಿ ಗುಂಪಿಗೆ ನೀಡಿದ್ದ ಪ್ರತ್ಯೇಕ ಶೇ.1 ರ ಮೀಸಲಾತಿ ಕಿತ್ತುಕೊಂಡುಸ್ಪಶ್ಯ ಜಾತಿಗಳಾದ ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳ ಗುಂಪಿಗೆ ನೀಡಿ ಸುಪ್ರಿಂಕೋರ್ಟ್ ಆದೇಶ ಉಲ್ಲಂಘಿಸಿದೆ.ಆದ್ದರಿಂದ ಅಲೆಮಾರಿ ಸಮುದಾಯಗಳಿಗೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಿ ಪ್ರತ್ಯೇಕ ಒಂದರಷ್ಟು ಮೀಸಲಾತಿಯನ್ನುಕಲ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಮಂಜಣ್ಣ, ಸುಧಾ ಮಹೇಶ್, ಭಾಗ್ಯಮ್ಮ, ಅಲೆಮಾರಿ ಸಮುದಾಯದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







