ಚಿತ್ರದುರ್ಗ : ಹಿಂದೂ ಮಹಾಗಣಪತಿ ಉತ್ಸವದ ಮೇಲೆ ಸರ್ಕಾರ ಒಂದಲ್ಲ ಒಂದು ರೀತಿಯ ನಿಬಂಧನೆಗಳನ್ನು ಹೇರುತ್ತಿರುವುದನ್ನು
ವಿಶ್ವಹಿಂದೂ ಪರಿಷತ್, ಬಜರಂಗದಳ ಸಹಿಸುವುದಿಲ್ಲವೆಂದು ಬಜರಂಗದಳ ರಾಜ್ಯ ಸಂಚಾಲಕ ಪ್ರಬಂಜನ್ ಹೇಳಿದರು.ಹಿಂದೂ ಮಹಾಗಣಪತಿ ಪ್ರತಿಷ್ಟಾಪಿಸಿರುವ ಪೆಂಡಾಲ್ ಸಮೀಪ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಎಲ್ಲಾ ಕಡೆ ಗಣಪತಿ ಮೆರವಣಿಗೆಯಲ್ಲಿ ಡಿ.ಜೆ.ಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ ಚಿತ್ರದುರ್ಗದ ಹಿಂದೂ ಮಹಾಗಣಪತಿಶೋಭಾಯಾತ್ರೆಗೆ ಏಕೆ ತಕರಾರು ಮಾಡುತ್ತಿದೆ. ಕಳೆದ ಹದಿನೆಂಟು ವರ್ಷಗಳಿಂದಲು ಯಾವುದೇ ಸಮಸ್ಯೆಗಳಿಲ್ಲದೆ ಹಿಂದೂಮಹಾಗಣಪತಿ ಮೆರವಣಿಗೆ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಮೆರವಣಿಗೆಯಲ್ಲಿ ಸ್ಪೀಕರ್ಗಳನ್ನು ಬಳಸಲು ಅನುಮತಿಕೊಡುತ್ತಿಲ್ಲ. ವಿಶ್ವಹಿಂದು ಪರಿಷತ್ನ ಶರಣ್ ಪಂಪ್ವೆಲ್ ಚಿತ್ರದುರ್ಗ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ.ಇವೆಲ್ಲವನ್ನು ವಿರೋಧಿಸಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದೆಂದು ತಿಳಿಸಿದರು.ಹಿಂದೂಗಳ ಶ್ರದ್ದಾ ಭಕ್ತಿಯ ಮೆರವಣಿಗೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದೊಂದು ದುರುದ್ದೇಶ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದರು.ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಶರಣ್ಕುಮಾರ್ ಮಾತನಾಡಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಸ್ಪೀಕರ್ಗೆ
ಅವಕಾಶ ನೀಡದಿರುವುದು ಹಾಗೂ ಶರಣ್ಪಂಪ್ವೆಲ್ ಚಿತ್ರದುರ್ಗ ಆಗಮನಕ್ಕೆ ನಿಷೇಧ ಹೇರಿರುವುದನ್ನು ಹಿಂದಕ್ಕೆ ಪಡೆಯುವಂತೆ
ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ನೀಡಿದ್ದೇವೆ. ಸರ್ಕಾರದ ಜೊತೆ ಮಾತನಾಡುತ್ತೇನೆ. ಇನ್ನೆರಡು ದಿನ ಸಮಯ ಕೊಡಿ ಎಂದು
ಕೇಳಿದ್ದಾರೆಂದರು.ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







