ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೊವೇರಹಟ್ಟಿಯ ಮೃತ ವಿದ್ಯಾರ್ಥಿನಿ ವರ್ಷಿತಾ ಅವರ ತಾಯಿಗೆ ಅಡುಗೆ ಸಹಾಯಕರ ನೌಕರಿ ಆದೇಶವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು.ಕೋವೇರಹಟ್ಟಿಯ ವರ್ಷಿತಾ ಎಂಬ ವಿದ್ಯಾರ್ಥಿನಿಯ ಮೃತ ದೇಹ ಇತ್ತೀಚೆಗೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ಬಳಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಆರ್ಥಿಕವಾಗಿ ಆಧಾರ ನೀಡುವ ಉದ್ದೇಶದಿಂದ, ವರ್ಷಿತಾ ಅವರ ತಾಯಿ ಟಿ. ಜ್ಯೋತಿ ಅವರಿಗೆ ಬುರುಜನರೊಪ್ಪದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಅಡುಗೆ ಸಹಾಯಕರ ಹುದ್ದೆಗೆ ನೇಮಕ ಮಾಡಲಾಗಿದೆ.ಈ ಸಂದರ್ಭದಲ್ಲಿ ಮೃತ ವಿದ್ಯಾರ್ಥಿನಿ ವರ್ಷಿತಾ ತಂದೆ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







