ಚಿತ್ರದುರ್ಗ: ಕನ್ನಡಚಿತ್ರರಂಗದ ನಟ ಡಾ.ವಿಷ್ಣುವರ್ಧನ್ ಹಾಗೂ ಪಂಚ ಭಾಷಾ ತಾರೆ ಬಿ.ಸರೋಜದೇವಿ ಅವರಿಗೆ ಮರಣೋತ್ತರ ಕರ್ನಾಟಕರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ ಆದರ್ಶ ಬಳಗ ಸ್ವಾಗತಿಸಿದೆ.ಈ ಹಿನ್ನಲೆ ತುರುವನೂರು ರಸ್ತೆಯಲ್ಲಿರುವ ಡಾ.ವಿಷ್ಣುವರ್ಧನ್ ಪರ್ಕ್ನಲ್ಲಿ ಗುರುವಾರ ಕೇಕ್ ಕತ್ತರಿಸಿ ಅಭಿಮಾನಿಗಳುಸಂಭ್ರಮಿಸಿದರು.ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿದ ಡಾ.ವಿಷ್ಣುವರ್ಧನ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಅವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದ್ದು, ಅಭಿಮಾನಿಗಳಲ್ಲಿ ಅತೀವ ಸಂತಸವುAಟಾಗಿದೆ ಎಂದು ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ.ಗೌಸ್ಪೀರ್ ಹೇಳಿದರು.ಹೇಮಂತ್ರಾಜ್, ರಘುವಿಷ್ಣು, ಲಯನ್ಬಾಬು, ರಾಜೇಶ್, ಲಕ್ಷ್ಮಣ್, ಅಜಯ್, ರಾಜು, ವೈಭವ್ ಹಾಗೂ ಪುಟಾಣಿಗಳಾದ ಖುಷಿ,ವಿಷ್ಣು, ರಿದ್ವಿನ್ ಇವರುಗಳು ಈ ಸಂದರ್ಭದಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







