ಚಿತ್ರದುರ್ಗ: ನಗರಸಭೆಯ 72 ಮಹಿಳಾ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕರ ಸಂಘದಿಂದ ಗೌರಿ-ಗಣೇಶ ಹಬ್ಬದ
ಕೊಡುಗೆಯಾಗಿ ಎಲೆ ಅಡಿಕೆ, ಹೂವು, ಹಣ್ಣು, ಬಳೆ ಸೀರೆಯಿರುವ ಬಾಗಿನ ನೀಡಲಾಯಿತು.ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ ಕುಮಾರ್ ಭಂಡಾರು ಮಹಿಳಾ ಪೌರ ಕಾರ್ಮಿಕರಿಗೆ ಬಾಗಿನ ಅರ್ಪಿಸಿ ಮಾತನಾಡುತ್ತ ಗೌರಿ-ಗಣೇಶಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ತವರು ಮನೆಯಿಂದ ಬಾಗಿನ ನೀಡುವುದು ಹಿಂದಿನಿಂದಲೂ ನಡೆದು ಬಂದಿರುವ ಪದ್ದತಿ.
ಜಿಲ್ಲಾ ಪೌರ ಕಾರ್ಮಿಕರ ಸಂಘದವರು ಬಾಗಿನ ಅರ್ಪಿಸಿ ಗೌರವಿಸುತ್ತಿರುವುದು ಅತ್ಯುತ್ತಮವಾದುದು ಎಂದು ಶ್ಲಾಘಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಹಾಗೂ ಉದ್ಯಮಿ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ ಮಹಿಳಾ ಪೌರ
ಕಾರ್ಮಿಕರ್ಯಾರು ಮೇಲು-ಕೀಳಲ್ಲ. ಅವರವರ ಕೆಲಸದ ಮೇಲೆ ಗೌರವ ಸಿಕ್ಕೆ ಸಿಗುತ್ತದೆ. ದಿನ ಬೆಳಗಾದರೆ ನಗರವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರ ಕೆಲಸ ಅತ್ಯಂತ ಪವಿತ್ರವಾದುದು. ಒಳ ಮೀಸಲಾತಿಯಡಿ ಮಾದಿಗರಿಗೆ ರಾಜ್ಯ ಸರ್ಕಾರ ಶೇ.6ರಷ್ಟು ಮೀಸಲಾತಿ ನೀಡಿರುವುದನ್ನು ಸದುಪಯೋಗಪಡಿಸಿಕೊಂಡು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ. 61 ಪೌರ ಕಾರ್ಮಿಕರನ್ನುಖಾಯಂಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.ಡಿವೈಎಸ್ಪಿ. ದಿನಕರ್ ಮಾತನಾಡುತ್ತ ಮಹಿಳಾ ಪೌರ ಕಾರ್ಮಿಕರಿಗೆ ಬಾಗಿನ ನೀಡುತ್ತಿರುವುದು ಅತ್ಯಂತ ಶ್ರೇಷ್ಟವಾದುದು. ಮುಂದಿನವರ್ಷ ಈ ಕಾರ್ಯಕ್ರಮವನ್ನು ನಗರಸಭೆಯಲ್ಲಿ ಅದ್ದೂರಿಯಾಗಿ ಮಾಡುವಂತೆ ಸಲಹೆ ನೀಡಿದರು.ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷರುಗಳಾದ ಕುಂಚಿಗನಹಾಳ್ ಮಹಲಿಂಗಪ್ಪ, ರಂಗಪ್ಪ, ಪ್ರಧಾನಕಾರ್ಯದರ್ಶಿ ಕೆ.ರಾಜಣ್ಣ, ಖಜಾಂಚಿ ಗೋವಿಂದ, ಸಹ ಕಾರ್ಯದರ್ಶಿ ನಿಜಲಿಂಗ, ಆಂಜನೇಯ(ಬಾಲು) ಏಕಾಂತಪ್ಪ, ಮಹಾಂತೇಶ್,ನಗರಸಭೆ ಅಧ್ಯಕ್ಷೆ ಸುಮಿತಾ, ಪೌರಾಯುಕ್ತರಾದ ರೇಣುಕ ಇವರುಗಳು ವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







