ಚಿತ್ರದುರ್ಗ:ಸಮಾಜ ಕಲ್ಯಾಣ ಇಲಾಖೆಯಿಂದ 7,700 ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು 2025-26ನೇ ಸಾಲಿನ ಅಕ್ಟೋಬರ್ 02ರ (ವಿಜಯದಶಮಿ)ಯಂದು ಮಹಾರಾಷ್ಟ್ರ ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ರೈಲಿನ ಮೂಲಕ ಕಳುಹಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 09 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 04 ರವರೆಗೆ ಪ್ರತಿ ವರ್ಷದಂತೆ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಕಳುಹಿಸಿಕೊಡಲಾಗುವುದು. ಯಾತ್ರಾರ್ಥಿಗಳು ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿಗಳು ಅಹ ಯಾತ್ರೆ ಕೈಗೊಳ್ಳಬಹುದು. ಯಾತ್ರಾರ್ಥಿಗೆ ಕನಿಷ್ಠ 18 ವರ್ಷ ಮೇಲ್ಪಟವರಾಗಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.ಆಸಕ್ತಯಾತ್ರಾರ್ಥಿಗಳು https://swd.karnataka.gov.in/ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







