ಚಿತ್ರದುರ್ಗ: ಕುಂಚಿಗನಾಳ್ ನಲ್ಲಿ ಹೊಸ ಜಿಲ್ಲಾಧಿಕಾರಿಗಳ ಕಛೇರಿಯನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಮಾಡುವ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಜಗದೀಶ್ ಮಾತಿಗೆ ಕಾಂಗ್ರೆಸ್ ಪಕ್ಷದ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಎನ್.ಡಿ.ಕುಮಾರ್, ಹಿಂದಿನ ಬಿಜೆಪಿ ಸರ್ಕಾರ ಊರಿನಿಂದ ಹೊರಗಡೆಯಲ್ಲಿ ನೂತನವಾಗಿ ಕಟ್ಟಡವನ್ನು ನಿರ್ಮಾಣ ಮಾಡುವುದರ ಮೂಲಕ ನಗರದ ಮಧ್ಯದಲ್ಲಿ ಇರುವ ಜಿಲ್ಲಾಧಿಕಾರಿಗಳ ಕಚೇರಿಯನ್ನು ಊರಿನಿಂದ ಹೊರಗಡೆಗೆ ಹಾಕಲು ತೀರ್ಮಾನ ಮಾಡಲಾಗಿ ಅಲ್ಲಿ ಕಟ್ಟಡವನ್ನು ಕಟ್ಟಲು ತಯಾರಿ ಮಾಡಿ ಈಗ ಪೂರ್ಣ ಪ್ರಮಾಣದಲ್ಲಿ ಕಟ್ಟಡ ನಿರ್ಮಾಣವಾಗಿದೆ ಆದರೆ ಇತ್ತಿಚೆಗೆ ಚಿತ್ರದುರ್ಗಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಸತೀಶ್ ಜಾರಕಿಹೊಳಿ ರವರು ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಿರುವ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು, ಇದರ ಬಗ್ಗೆ ಮುಖ್ಯಮಂತ್ರಿಗಳು ಅಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಪ್ರಾರಂಭ ಮಾಡುವುದು ಬೇಡ ಬೇರೆದ್ದಕ್ಕೆ ಉಪಯೋಗವನ್ನು ಮಾಡುವಂತೆ ಸೂಚಿಸಿದ್ದರು ಎಂದರು.
ಇದರಂತೆ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಗಳ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ನೀಡಲು ಜಿಲ್ಲೆಯ ಸಚಿವರು,
ಶಾಸಕರು, ಅಧಿಕಾರಿಗಳು ಸಮ್ಮತಿಸಿದ್ದಾರೆ ಇದರ ಮಧ್ಯೆ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಜಗದೀಶ್ ರವರ ಅಲ್ಲಿ ಮೆಡಿಕಲ್
ಕಾಲೇಜು ಮಾಡುವುದು ಬೇಡ ಜಿಲ್ಲಾಧಿಕಾರಿಗಳ ಕಚೇರಿಯನ್ನು ಪ್ರಾರಂಭ ಮಾಡಿ ಎಂದು ಸರ್ಕಾರವನ್ನು ಒತ್ತಾಯಿಸಿರುವುದು
ಸರಿಯಾದ ಕ್ರಮವಲ್ಲ, ಅಲ್ಲಿ ಮೆಡಿಕಲ್ ಕಾಲೇಜನ್ನು ಮಾಡುವುದರಿಂದ ಊರು ಅಭೀವೃದ್ದಿ ಹೊಂದುತ್ತದೆ. ಇದ್ದಲ್ಲದೆ ಹಲವಾರು
ಜನರಿಗೆ ಉದ್ಯೋಗ ದೂರಕುತ್ತದೆ, ಸಾರಿಗೆ ವ್ಯವಸ್ಥೆ ಬೆಳೆಯುತ್ತದೆ, ಇದರಿಂದ ಹಲವಾರು ಜನರಿಗೆ ಕೆಲಸ ದೊರಕುತ್ತದೆ ಎಂದು
ತಿಳಿಸಿದರು. ಹಿಂದಿನ ಸರ್ಕಾರ ಮಾಡಿದ ಕೆಟ್ಟ ನಿರ್ಧಾರದಿಂದ ಜನತೆಗೆ ತೊಂದರೆಯಾಗುತ್ತದೆ ಇದನ್ನು ಮನಗಂಡ ನಮ್ಮ ಭಾಗದ ಚುನಾಯಿತ
ಪ್ರತಿನಿಧಿಗಳು ಅದನ್ನು ಜಿಲ್ಲಾಧಿಕಾರಿಗಳ ಕಚೇರಿಯ ಬದಲು ಮೆಡಿಕಲ್ ಕಾಲೇಜನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ
ಅನುಕೂಲವಾಗುತ್ತದೆ, ಅಲ್ಲದೆ ಅವರ ವಿದ್ಯಾಭ್ಯಾಸಕ್ಕೂ ಸಹಾ ಅನುಕೂಲವಾಗಲಿದೆ ಎಂದು ಎನ್.ಡಿ. ಕುಮಾರ್ ತಿಳಿಸಿದ್ದು ಅಲ್ಲಿ
ಯಾವುದೇ ಕಾರಣಕ್ಕೂ ಸಹಾ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮಾಡದೇ ಮೆಡಿಕಲ್ ಕಾಲೇಜನ್ನು ಪ್ರಾರಂಭ ಮಾಡುವುದು ಸೂಕ್ತ
ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







