ಚಿತ್ರದುರ್ಗ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಇದೇ ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ಆಧಾರ್ ಸೀಡಿಂಗ್ ಅಭಿಯಾನಕೈಗೊಳ್ಳಲಾಗಿದೆ.ಪರಿಶಿಷ್ಟವರ್ಗಗಳವಿದ್ಯಾರ್ಥಿಗಳಮೆಟ್ರಿಕ್ಪೂರ್ವಮತ್ತುಮೆಟ್ರಿಕ್ನಂತರದವಿದ್ಯಾರ್ಥಿವೇತನಯೋಜನೆಗಳನ್ನುರಾಜ್ಯವಿದ್ಯಾರ್ಥಿವೇತನತಂತ್ರಾಂಶದಮೂಲಕಅನುಷ್ಠಾನಗೊಳಿಸಲಾಗಿದ್ದು,ನೇರ ನಗದು ವರ್ಗಾವಣೆ ತಂತ್ರಾಂಶದ ಮೂಲಕ ಅರ್ಹ ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆ. ಆಧಾರ್ ಸೀಡಿಂಗ್ ಆಗದೇ ಇರುವ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಿಗೆ ತಾಂತ್ರಿಕ ಅಡೆತಡೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಲು ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಿಸಲು ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಎಲ್ಲ ಶಾಲೆ, ಕಾಲೇಜುಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಮಾಡಿಸಿ, ನಿಗಧಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚಿಸಿದೆ.ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-226659 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







